ಬೆಂಗಳೂರು: ‘ಕರ್ನಾಟಕದಲ್ಲಿ ಶೇ63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತರೇ ಸಾರ್ವಜನಿಕವಾಗಿ ಹೇಳಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಕಮೀಷನ್ ಆರೋಪಗಳು ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕ್ಷಿ ಕೊಡಿ ಎಂದು ಕೇಳಿದ್ದರು. ಭ್ರಷ್ಟಾಚಾರಕ್ಕೆ ನ್ಯಾಯಮೂರ್ತಿ ಅವರೇ ಸಾಕ್ಷಿಯಾಗಿದ್ದಾರೆ. ಈಗ ‘ಪೇಸಿಎಂ’ ಎಂಬ ಭಿತ್ತಿಪತ್ರವನ್ನು ಕಾಂಗ್ರೆಸ್ ನಾಯಕರ ಮುಖಕ್ಕೆ ಅಂಟಿಸಬೇಕು’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖಕ್ಕೆ ನ್ಯಾಯಮೂರ್ತಿಗಳು ಮಂಗಳಾರತಿ ಎತ್ತಿದ್ದಾರೆ. ಭೋವಿ ನಿಗಮದಲ್ಲಿ ಒಂದು ಎಕರೆ ಭೂಮಿ ಮಂಜೂರು ಮಾಡಲು ₹25 ಲಕ್ಷ ಕಮೀಷನ್ ಇದೆ. ಮದ್ಯದಂಗಡಿ ಪರವಾನಗಿಗೆ ₹20 ಲಕ್ಷ ಇದೆ. ವಿದ್ಯುತ್ ಪರಿವರ್ತಕ ಅಳವಡಿಕೆಯಲ್ಲಿ ₹90 ಕೋಟಿ, ಕಸದ ಯಂತ್ರ ಖರೀದಿಯಲ್ಲಿ ₹2.5 ಕೋಟಿ ಹಗರಣ ನಡೆದಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.