ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT
ADVERTISEMENT

ದ್ವೇಷ ಭಾಷಣ ಮಾಡಿದರೆ 7 ವರ್ಷ ಜೈಲು, 1 ಲಕ್ಷ ದಂಡ: ಹೊಸ ಮಸೂದೆ

Published : 4 ಡಿಸೆಂಬರ್ 2025, 16:07 IST
Last Updated : 4 ಡಿಸೆಂಬರ್ 2025, 16:07 IST
ಫಾಲೋ ಮಾಡಿ
Comments
ಟಿಇಟಿ ವಿನಾಯಿತಿ: ಶಿಕ್ಷಕರಿಗೆ ನಿರಾಳ
ಒಂದರಿಂದ ಐದನೇ ತರಗತಿವರೆಗಿನ ಪ್ರಾಥಮಿಕ ಶಾಲಾ ಶಿಕ್ಷಕರು ಆಯಾ ವಿಷಯಗಳಲ್ಲಿ ಪದವಿಯನ್ನು ಹೊಂದಿದ್ದರೆ ಸಾಕು ಆರು ಮತ್ತು ಏಳನೇ ತರಗತಿಗೆ ಬೋಧನೆ ಮಾಡಬಹುದು. ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಮಾಣಪತ್ರ ಹೊಂದಿರಬೇಕೆಂಬ ಷರತ್ತನ್ನು ಕೈಬಿಟ್ಟು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅನುವಾಗುವಂತೆ ತಿದ್ದುಪಡಿ ಮಾಡಿ ಇದೇ ಅ. 16ರಂದು ಹೊರಡಿಸಿದ್ದ ವೃಂದ ಮತ್ತು ನೇಮಕಾತಿ (ತಿದ್ದುಪಡಿ) ಕರಡು ನಿಯಮಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಲ್ಲದೆ, 800 ಸರ್ಕಾರಿ (ಮ್ಯಾಗ್ನೆಟ್‌) ಶಾಲೆಗಳನ್ನು ಏಷ್ಯನ್‌ ಅಭಿವೃದ್ಧಿ ಬ್ಯಾಂಕ್, ಕೆಕೆಆರ್‌ಡಿಬಿ ಸೇರಿದಂತೆ ವಿವಿಧ ನಿಧಿಗಳ ಸಹಾಯದಿಂದ ಕೆಪಿಎಸ್‌ ಮಾನದಂಡಗಳ ಕೈಪಿಡಿಯಂತೆ ‘ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಉನ್ನತೀಕರಿಸಲು, ವಿಸ್ಕೃತ ಯೋಜನಾ ವರದಿ ಸಿದ್ಧಪಡಿಸಲು ಸಂಸ್ಥೆಯೊಂದನ್ನು ಆಯ್ಕೆ ಮಾಡಿಕೊಳ್ಳಲೂ ಸಂಪುಟ ಅನುಮೋದನೆ ನೀಡಿದೆ.
1,777 ಎಕರೆ ಭೂಮಿ ಕೈಬಿಡಲು ಒಪ್ಪಿಗೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ ಒಟ್ಟು 1,777 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆಗಳಿಂದ ಕೈಬಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಭೂಸ್ವಾಧೀನ ಮಾಡಲು ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು. ಅದನ್ನು ವಿರೋಧಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತ್ತು. 1339 ದಿನ ನಡೆದ ಹೋರಾಟದ ಬಳಿಕ ಭೂ ಸ್ವಾಧೀನ ಕೈಬಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT