ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲ್ಲೂಕಿನ ಮೊಂಟೆಪದವು ಪಂಬದಹಿತ್ತಿಲುಕೋಡಿಕೊಪ್ಪಲಿನಲ್ಲಿ ಮನೆಯ ಮೇಲೆ ಗುಡ್ಡು ಕುಸಿದು ಮಣ್ಣಿನಡಿ ಸಿಲುಕಿದ್ದ ಅಶ್ವಿನಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್.
ತ್ವರಿತ ಪರಿಹಾರ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು:‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಪರಿಸ್ಥಿತಿ ನಿರ್ವಹಣೆ ಮಾಡಲು ಸಿದ್ದರಾಗಿ. ಮಳೆಹಾನಿ ಪ್ರದೇಶಗಳಿಗೆ ತಕ್ಷಣವೇ ಭೇಟಿ ನೀಡಿ ಪರಿಹಾರ ಒದಗಿಸಿ. ಭೂಕುಸಿತದ ಅಪಾಯ ಇರುವ ಪ್ರದೇಶದಿಂದ ಜನರನ್ನು ತೆರವು ಮಾಡಿ. ರಾಜ್ಯ ವಿಪತ್ತು ನಿರ್ವಹಣಾ ನಿಧಿಯಲ್ಲಿ ₹1,000 ಕೋಟಿಗೂ ಅಧಿಕ ಮೊತ್ತವಿದ್ದು, ಪರಿಹಾರ ನೀಡಲು ಹಿಂದೇಟು ಹಾಕಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒಗಳಿಗೆ ಸೂಚಿಸಿದ್ದಾರೆ.