ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ವಿವಿಧ ಇಲಾಖೆಗಳ ಹತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಹತ್ತು ಜಿಲ್ಲೆಗಳ 40 ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಜಿನಿಯರ್ ಹನುಮಂತರಾಯಪ್ಪ, ಲೋಕೋಪಯೋಗಿ ಇಲಾಖೆಯ ಮಂಡ್ಯ ವಿಭಾಗದ ಎಂಜಿನಿಯರ್ ಹರ್ಷ, ಚಿಕ್ಕಮಗಳೂರಿನ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್ ಜಿ., ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿ ರೇಣುಕಮ್ಮ, ಚಾಮರಾಜನಗರದ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಪಿ. ರವಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಯಜ್ಞೇಂದ್ರ, ಬಳ್ಳಾರಿಯ ಸಹಾಯಕ ಪ್ರಾಧ್ಯಾಪಕ ಬಿ. ರವಿ, ವಿಜಯನಗರ ಜಿಲ್ಲೆಯ ಇಂಧನ ಇಲಾಖೆ ಅಧಿಕಾರಿ ಭಾಸ್ಕರ್ ಮತ್ತು ಮಂಗಳೂರಿನ ಮೆಸ್ಕಾಂ ಅಧಿಕಾರಿ ಶಾಂತಕುಮಾರ್ ಅವರಿಗೆ ಸಂಬಂಧಿಸಿದ 40 ಸ್ಥಳಗಳ ಮೇಲೆ ಬುಧವಾರ ನಸುಕಿನಲ್ಲಿ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

ಆರೋಪಿ ಅಧಿಕಾರಿಗಳು ಹಾಗೂ ಅವರ ಸಂಬಂಧಿಗಳು, ಶಂಕಿತ ಬೇನಾಮಿದಾರರ ಮನೆ, ಕಚೇರಿ ಹಾಗೂ ವ್ಯವಹಾರ ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಲೋಕಾಯುಕ್ತ ಪೊಲೀಸರನ್ನು ಒಳಗೊಂಡ 40 ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.