ನವದೆಹಲಿ: ಲೋಕಸಭಾ ಚುನಾವಣೆಯನ್ನು ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಎದುರಿಸಲು ನಿರ್ಧರಿಸಿರುವ ಜಾತ್ಯತೀತ ಜನತಾದಳವು (ಜೆಡಿಎಸ್), ಬಿಜೆಪಿ ನೇತೃತ್ವದ ಎನ್ಡಿಎಗೆ ಶುಕ್ರವಾರ ಅಧಿಕೃತವಾಗಿ ಸೇರ್ಪಡೆಯಾಗಿದೆ. ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯ ಪ್ರಕ್ರಿಯೆಯನ್ನು ದಸರಾ ಹಬ್ಬದ ನಂತರ ನಡೆಸಲು ಉಭಯ ಪಕ್ಷಗಳ ಉನ್ನತ ನಾಯಕರು ನಿರ್ಧರಿಸಿದ್ದಾರೆ.

ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ 2006–07ರಲ್ಲಿ ಅಧಿಕಾರ ನಡೆಸಿದ್ದವು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನವನ್ನು ವಾಗ್ದಾನದಂತೆ 20 ತಿಂಗಳ ಬಳಿಕ ಬಿಟ್ಟುಕೊಟ್ಟಿಲ್ಲ ಎಂಬ ಕಾರಣಕ್ಕೆ ‘ಮೈತ್ರಿ’ ಸರ್ಕಾರ ಪತನಗೊಂಡಿತ್ತು. ಇದೀಗ ಎರಡೂ ಪಕ್ಷಗಳು ಎರಡನೇ ಇನಿಂಗ್ಸ್ ಆರಂಭಿಸಿವೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶಾ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಜೆಡಿಎಸ್–ಬಿಜೆಪಿ ಮೈತ್ರಿ ಸಂಬಂಧ ಸುದೀರ್ಘವಾಗಿ ಸಮಾಲೋಚಿಸಿದರು. ಎನ್ಡಿಎ ಒಕ್ಕೂಟಕ್ಕೆ ಅಧಿಕೃತವಾಗಿ ಸೇರಲು ಕುಮಾರಸ್ವಾಮಿ ಸಮ್ಮತಿ ಸೂಚಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ರಾಷ್ಟ್ರ ರಾಜಧಾನಿಯಲ್ಲಿ ಇದ್ದರೂ ಅವರಿಗೆ ಈ ಸಭೆಗೆ ಆಹ್ವಾನ ಇರಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯದ ನಾಯಕರನ್ನು ನಿರಂತರವಾಗಿ ಕಡೆಗಣಿಸುತ್ತಿರುವ ಬಿಜೆಪಿ ವರಿಷ್ಠರು, ‘ಮೈತ್ರಿ’ ಮಾತುಕತೆಯಿಂದಲೂ ದೂರವಿಟ್ಟು ಸಂದೇಶ ರವಾನಿಸಿದರು. ಆದರೆ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹಾಜರಿದ್ದು ಮೈತ್ರಿ ರೂಪುಗೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ದೆಹಲಿಯಲ್ಲಿ ಇದ್ದರೂ ‘ದೋಸ್ತಿ’ ಮಾತುಕತೆಯಿಂದ ದೂರ ಉಳಿದರು. ಅವರು, ಅಮಿತ್ ಶಾ ಅವರನ್ನು ಎರಡು ವಾರಗಳ ಹಿಂದೆ ಭೇಟಿ ಮಾಡಿ ‘ಮೈತ್ರಿ’ ಕುರಿತು ಆರಂಭಿಕ ಹಂತದ ಚರ್ಚೆ ನಡೆಸಿದ್ದರು. ಬಳಿಕ ಮಾತುಕತೆಯ ಹೊಣೆಯನ್ನು ಕುಮಾರಸ್ವಾಮಿಗೆ ವಹಿಸಿದ್ದರು.

ಮಹತ್ವದ ಸಭೆಯ ಬಳಿಕ, ನಡ್ಡಾ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ, ‘ಮೈತ್ರಿಕೂಟದ ಭಾಗವಾಗಲು ಜೆಡಿಎಸ್ ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ಪಕ್ಷವನ್ನು ಎನ್ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದು ಎನ್ಡಿಎ ಮತ್ತು ಪ್ರಧಾನಿಯವರ ‘ನವ ಭಾರತ, ಬಲಿಷ್ಠ ಭಾರತ’ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದರು.

ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ‘ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಯಾರಿಗೆಷ್ಟು ಕ್ಷೇತ್ರಗಳು ಎಂಬುದನ್ನು ದಸರಾ ನಂತರ ನಿರ್ಧಾರ ಮಾಡುತ್ತೇವೆ’ ಎಂದರು.

‘ಯಾರು ಯಾರಿಗೆ ಎಷ್ಟು ಸೀಟು ಹಂಚಿಕೆ ಆಗುತ್ತದೆ ಎನ್ನುವುದು ಮುಖ್ಯವಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ವಿಷಯವನ್ನು ನಾನು ಬಿಜೆಪಿ ವರಿಷ್ಠರಿಗೆ ಒತ್ತಿ ಹೇಳಿದ್ದೇನೆ. ನನ್ನ ಮಾತಿಗೆ ಅವರೂ ಸಹಮತ ವ್ಯಕ್ತಪಡಿಸಿದರು’ ಎಂದು ಅವರು ತಿಳಿಸಿದರು.

‘ಬರೀ ಮೈತ್ರಿಯ ಬಗ್ಗೆಯಷ್ಟೇ ಕೇಳಬೇಡಿ. ಕಾವೇರಿ ವಿಷಯದ ಬಗ್ಗೆಯೂ ಕೇಳಿ. ನಾನಿಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲು ಬಂದಿದ್ದೇನೆ. ಕಾವೇರಿ, ಬರ ಸೇರಿದಂತೆ ರಾಜ್ಯದ ಮುಂದಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ವರಿಷ್ಠರ ಗಮನ ಸೆಳೆದಿದ್ದೇನೆ’ ಎಂದರು.

ಮಾತುಕತೆ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಜರಿದ್ದರು

ಎನ್ಡಿಎ ಕುಟುಂಬಕ್ಕೆ ಜೆಡಿಎಸ್ ಪಕ್ಷವನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಜೆಡಿಎಸ್ ಸಹಯೋಗವು ಕರ್ನಾಟಕವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಲು ಬಲಿಷ್ಠ ಭಾರತ ಹಾಗೂ ಬಲಿಷ್ಠ ಎನ್ಡಿಎ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ –ಅಮಿತ್ ಶಾ ಕೇಂದ್ರ ಗೃಹ ಸಚಿವ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮೈತ್ರಿ ವಿಷಯದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. 20 ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಂದರ್ಭದಲ್ಲೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದೆ. ಈ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಇದ್ದಾರೆ. ಎಲ್ಲ ತೀರ್ಮಾನಗಳನ್ನು ಅವರೇ ಮಾಡಲಿದ್ದಾರೆ. ಪಕ್ಷ ಉಳಿಸಲು ಕುಮಾರಸ್ವಾಮಿ ಹೋರಾಡುತ್ತಿದ್ದಾರೆ. ನನಗೆ ಈ ವಿಷಯ ಮಾತನಾಡುವ ಮನಸ್ಸಿಲ್ಲ

–ಎಚ್.ಡಿ.ದೇವೇಗೌಡ ಜೆಡಿಎಸ್ ವರಿಷ್ಠ

ಸೀಟು ಹಂಚಿಕೆ ಪ್ರಸ್ತಾಪವಿಲ್ಲ:

2008ರಿಂದ 2023ರ ವರೆಗೆ ನಡೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಉಭಯ ಪಕ್ಷಗಳು ಗೆದ್ದ ಸ್ಥಾನಗಳು ಮತ ಪ್ರಮಾಣ ಹಾಗೂ ರಾಜ್ಯದಲ್ಲಿ ಯಾವ ಭಾಗದಲ್ಲಿ ಯಾವ ಪಕ್ಷ ಬಲಿಷ್ಠವಾಗಿದೆ ಮೈತ್ರಿಯಿಂದ ಆಗುವ ಸಾಧಕ ಬಾಧಕಗಳೇನು ಎಂಬ ವಿಷಯಗಳ ಕುರಿತು ಬಿಜೆಪಿ ವರಿಷ್ಠರಿಗೆ ಕುಮಾರಸ್ವಾಮಿ ಮನವರಿಕೆ ಮಾಡಿಕೊಟ್ಟರು. ಶುಕ್ರವಾರದ ಸಭೆಯ ವೇಳೆ ಸೀಟು ಹಂಚಿಕೆಯ ಕುರಿತು ಪ್ರಸ್ತಾಪವಾಗಲಿಲ್ಲ. ಎನ್ಡಿಎ ಒಕ್ಕೂಟಕ್ಕೆ ಸೇರಲು ಬಿಜೆಪಿ ತಿಂಗಳುಗಳ ಹಿಂದೆಯೇ ಆಹ್ವಾನ ನೀಡಿತ್ತು. ಇದೀಗ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಚುನಾವಣೆಯಲ್ಲಿ ಅನುಕೂಲ:

ಉಭಯ ಪಕ್ಷಗಳ ಮೈತ್ರಿಯಿಂದ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ ಕಲಬುರ್ಗಿ ತುಮಕೂರು ಚಿತ್ರದುರ್ಗ ಮೈಸೂರು ಚಾಮರಾಜನಗರ ರಾಯಚೂರು ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಲ್ಲಿ ‘ಕೈ’ಪಾಳಯವನ್ನು ಸುಲಭದಲ್ಲಿ ಕಟ್ಟಿ ಹಾಕಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆದವು ಎಂದು ಮೂಲಗಳು ತಿಳಿಸಿವೆ. ಎಡವಟ್ಟು ಕುರಿತು ಎಚ್ಚರ: 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಉಭಯ ಪಕ್ಷಗಳು ತಲಾ ಒಂದು ಸ್ಥಾನ ಗೆದ್ದಿದ್ದವು. ಕಾಂಗ್ರೆಸ್ನ ಕೆಲವು ನಾಯಕರೇ ಕೆಲವು ಕ್ಷೇತ್ರಗಳಲ್ಲಿ ಮೈತ್ರಿಕೂಟದ ಸೋಲಿಗೆ ಕಾರಣರಾಗಿದ್ದರು. ಬಿಜೆಪಿ–ಜೆಡಿಎಸ್ ಮೈತ್ರಿಯಿಂದ ಇಂತಹ ಎಡವಟ್ಟುಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಗಮನ ಸೆಳೆದರು. ‘ಅತೃಪ್ತಿ ಶಮನಕ್ಕೆ ಒತ್ತು’: ದೋಸ್ತಿ ಬಗ್ಗೆ ಬಿಜೆಪಿಯ ಕೆಲವು ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರನ್ನು ಆದಷ್ಟು ಶೀಘ್ರದಲ್ಲಿ ಕರೆದು ಮಾತನಾಡಿಸಿ ಮುನಿಸು ಶಮನಗೊಳಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು. ಈ ಎಲ್ಲ ಸಮಸ್ಯೆಗಳನ್ನು ಕೆಲವೇ ದಿನಗಳಲ್ಲಿ ಬಗೆಹರಿಸುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದು ಬಿಜೆಪಿ ವರಿಷ್ಠರು ಭರವಸೆ ನೀಡಿದರು.

‘ಕಾಂಗ್ರೆಸ್ಗೆ ಪಾಠ’:

‘ಬಿಜೆಪಿ–ಜೆಡಿಎಸ್ ನಾಯಕರ ಕಾರ್ಯಕರ್ತರು ಬೇಗ ಹೊಂದಾಣಿಕೆ ಮಾಡಿಕೊಳ್ಳಲಿದ್ದಾರೆ. ಇದೊಂದು ಸಹಜ ಮೈತ್ರಿ ಆಗಲಿದೆ. ‘ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಬೀಗುತ್ತಿರುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಸೊನ್ನೆಗೆ ಇಳಿಸಬೇಕು. ಅದಕ್ಕಾಗಿ ಸೀಟು ಹಂಚಿಕೆಯ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸೋಣ. ಕೊಡು ಕೊಳ್ಳುವಿಕೆಯಲ್ಲಿ ಎರಡೂ ಪಕ್ಷಗಳ ನಾಯಕರು ಉದಾರವಾಗಿ ಇರೋಣ’ ಎಂದು ಜೆಡಿಎಸ್–ಬಿಜೆಪಿ ವರಿಷ್ಠರು ಸಂಧಾನಕ್ಕೆ ಬಂದರು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.