ಬೆಂಗಳೂರು: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ಟಿಒ) ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ದುರಾಡಳಿತ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಲು ಇಲ್ಲಿನ ಬಹುತೇಕ ಆರ್ಟಿಒ ಕಚೇರಿಗಳ ಮೇಲೆ ಬುಧವಾರ ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ವ್ಯಾಪ್ತಿಯ ಹಲವು ಆರ್ಟಿಒ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಜಯನರ ಮತ್ತು ರಾಜಾಜಿನಗರ ಆರ್ಟಿಒ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿನೀಡಿ ಪರಿಶೀಲನೆ ನಡೆಸಲಿದ್ದಾರೆ. ಯಲಹಂಕ ಮತ್ತು ಯಶವಂತಪುರ ಆರ್ಟಿಒ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಭೇಟಿನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಟಿಒ ಕಚೇರಿಗಳಲ್ಲಿ ಭ್ರಷ್ಟಾಚಾರ, ದುರಾಡಳಿತ ಮತ್ತು ಅವ್ಯವಹಾರ ನಡೆಯುತ್ತಿರುವ ಕುರಿತು ಸಾರ್ವಜನಿಕರ ದೂರುಗಳನ್ನು ಆಧರಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆಗೆ ಪೂರಕವಾಗಿ ಆರ್ಟಿಒ ಕಚೇರಿಗಳಲ್ಲಿ ಶೋಧ ನಡೆಸುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗಕ್ಕೆ ಆದೇಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.