ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ರನಿಗೆ ಹಾವೇರಿ ಟಿಕೆಟ್, ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ: ಈಶ್ವರಪ್ಪ

ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧೆ ಮಾಡುವೆ: ಕೆ.ಎಸ್.ಈಶ್ವರಪ್ಪ
Published 13 ಮಾರ್ಚ್ 2024, 6:46 IST
Last Updated 13 ಮಾರ್ಚ್ 2024, 6:46 IST
ಅಕ್ಷರ ಗಾತ್ರ

ಶಿವಮೊಗ್ಗ: 'ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಭರವಸೆ ಕೊಟ್ಟ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ' ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 'ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ' ಎಂದು ಹೇಳಿದರು.

ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ ಎಂದರು.

'ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT