ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಸಂಬಂಧ ಅವರು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದ್ದು, ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್, ಪ್ರಸ್ತಾವಿತ ಬೆಂಗಳೂರು-ಮುಂಬಯಿ ಹೊಸ ಸಂಪರ್ಕ ಮತ್ತು ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್ಗಳ ಅನುಷ್ಠಾನದ ಕುರಿತು ವಿವರವಾದ ಮಾತುಕತೆ ನಡೆಸಲಾಯಿತು.

ಜತೆಗೆ, ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲಾ ಬಾಕಿ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು ಮತ್ತು ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರಾಮನಗರದಲ್ಲಿ ನಿಲುಗಡೆಯನ್ನು ಕೋರಿ ಮನವಿ ಮಾಡಲಾಯಿತು ಎಂದು ಎಚ್ಡಿಕೆ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮಂಡ್ಯ ಜಿಲ್ಲೆಯಲ್ಲಿ ಸುಧಾರಿತ ಆಧಾರ್ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ ಕೂಡ ಎತ್ತಿ ತೋರಿಸಲಾಯಿತು. ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರೀಯುತರೊಂದಿಗೆ ನಡೆದ ಫಲಪ್ರದವಾಗಿತ್ತು ಎಮದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

#IndianRailways

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.