ಕಲಬುರಗಿ: ಜಿಲ್ಲೆಯ ಜೇವರ್ಗಿತ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು.

ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ ಬೀಳಗಿ ಅವರ ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.

ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.

ಇದಕ್ಕೂ ಮುನ್ನ ಧಾರವಾಡದಲ್ಲಿ ಇಂಗ್ಲಿಷ್ ಟ್ಯೂಷನ್ ಹೇಳುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.