ಬೆಂಗಳೂರು: ‘ಆರ್ಸಿಬಿ ವಿಜಯೋತ್ಸವ ಮೆರವಣಿಗೆ ಬೇಡ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದರು. ತನಿಖಾ ವರದಿಯಲ್ಲಿ ಸತ್ಯಾಂಶ ಬಹಿರಂಗ ಆಗಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿಜಯೋತ್ಸವದಲ್ಲಿ ಅಷ್ಟೊಂದು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಯಾರಿಗೂ ಇರಲಿಲ್ಲ. ದೊಡ್ಡ ಸಂಖ್ಯೆಯ ಜನರಿಗೆ ಬಂದೋಬಸ್ತು ಮಾಡಲು ತಿಂಗಳುಗಟ್ಟಲೆ ಸಮಯ ಬೇಕಾಗುತ್ತದೆ’ ಎಂದರು.

‘ದುರಂತಕ್ಕೆ ಸರ್ಕಾರ ಹೊಣೆಯೊ, ಕೆಎಸ್ಸಿಎ ಹೊಣೆಯೊ ಎನ್ನುವುದನ್ನು ತಿಳಿದುಕೊಳ್ಳಬೇಕು. ಇದು ಕಷ್ಟದ ಕೆಲಸ. ಈಗ ಘಟನೆ ಆಗಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗುವುದನ್ನು ತಡೆಯಬೇಕು’ ಎಂದರು.

‘ಆರ್ಸಿಬಿ ತಂಡವನ್ನು ಸನ್ಮಾನಿಸುವ ಸರ್ಕಾರದ ಕಾರ್ಯಕ್ರಮ ವಿಧಾನಸೌಧಕ್ಕೆ ಸೀಮಿತವಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಖಾಸಗಿ ಕಾರ್ಯಕ್ರಮವಾದ ಕಾರಣ ಶಿಷ್ಟಾಚಾರದಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆಗಿದೆ. ದಿಢೀರ್ ಇಷ್ಟೊಂದು ಜನ ಸೇರಿದರೆ ಏನು ಮಾಡಲು ಸಾಧ್ಯ’ ಎಂದೂ ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.