ಬೆಂಗಳೂರು: ಕೆಎಎಸ್ ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದರು. ಫೆ.18ರಂದು ಬೆಂಗಳೂರು ನಗರ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವೊಂದರ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಅವರು ತಮ್ಮ ಪುತ್ರನ ಜತೆಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶುಕ್ರವಾರ ಬಂದಿದ್ದರು. ಆ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘ಮಡಿವಾಳದ ವಿಧಿ ವಿಜ್ಞಾನ ಪ್ರಯೋಗಾಲಯ ಬಳಿಯ ಸಿಸಿಬಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಮುಂಬಡ್ತಿ ಪಡೆಯಲು ಡಿ.ಬಿ.ನಟೇಶ್ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ₹1.5 ಕೋಟಿ ಲಂಚ ನೀಡಿದ್ದಾರೆಂದು ಆರೋಪಿಸಿ, ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಮಾಹಿತಿ ಹಂಚಿಕೊಂಡಿದ್ದರು. ತಮ್ಮ ಮೇಲಿನ ಆರೋಪವನ್ನು ಶಾಲಿನಿ ರಜನೀಶ್ ಅವರು ನಿರಾಕರಿಸಿದ್ದರು. ಮತ್ತೊಂದೆಡೆ ನಟೇಶ್ ಅವರು ಸಿಸಿಬಿಗೆ ದೂರು ನೀಡಿದ್ದರು’ ಎಂದು ಮೂಲಗಳು ತಿಳಿಸಿವೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ.ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಈ ಹಿಂದೆ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೂರು ನೀಡಿದ್ದರು. ಬಳಿಕ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ನ್ಯಾಯಾಲಯವು ಬಿ–ರಿಪೋರ್ಟ್ ಅನ್ನು ಇತ್ತೀಚೆಗೆ ಮಾನ್ಯ ಮಾಡಿದೆ.

ನಟೇಶ್ ದೂರಿನಲ್ಲಿ ಏನಿತ್ತು?

‘ನನ್ನ ಫೋಟೊ ಬಳಸಿಕೊಂಡು ನಕಲಿ ಆಡಿಯೊ ಹಾಗೂ ದಾಖಲೆ ಸೃಷ್ಟಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ನಟೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ಕಚೇರಿ ಮನೆಯಲ್ಲಿ ಪರಿಶೀಲನೆ

‘ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಮೈಸೂರಿನ ಗೌರಿಶಂಕರ ನಗರದಲ್ಲಿ ಇರುವ ಸ್ನೇಹಮಯಿ ಕೃಷ್ಣ ಅವರ ನಿವಾಸ ಹಾಗೂ ಬೆಂಗಳೂರಿನ ಕಚೇರಿ ಮೇಲೆ ದಾಳಿ ಮಾಡಿ ಶೋಧ ನಡೆಸಲಾಗಿದೆ. ಅಲ್ಲದೇ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಧ್ವನಿ ತುಣುಕುಗಳು ಹಾಗೂ ಮಾಹಿತಿಯನ್ನು ಸಂಗ್ರಹಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.