ಬೆಂಗಳೂರು: ‘ಜೆಡಿಎಸ್ನ ದೊಡ್ಡ ಗೌಡರು, ಅವರ ಮಕ್ಕಳು ಮತ್ತು ಮೊಮ್ಮಕ್ಕಳು ದೇಶಕ್ಕಾಗಿ ಯಾವ ತ್ಯಾಗ ಮಾಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾನು ವಿದ್ಯಾರ್ಥಿಯಾಗಿದ್ದಾಗ ನಾನು ಜನರಲ್ ಹಾಸ್ಟೆಲ್ನಲ್ಲಿದ್ದೆ. ನಮ್ಮ ಊರಿನಲ್ಲಿ ಆಗ ದೂರವಾಣಿ ಸಂಪರ್ಕ ಇರಲಿಲ್ಲ. ಅದನ್ನು ಪಡೆಯಬೇಕಾದರೆ ಮೂರರಿಂದ ನಾಲ್ಕು ವರ್ಷ ಕಾಯಬೇಕಿತ್ತು. ಆದರೆ, ಇಂದು ಪ್ರತಿಯೊಬ್ಬರೂ ಎರಡು ಮೂರು ಫೋನ್ ಇಟ್ಟುಕೊಂಡಿದ್ದಾರೆ. ಈ ದೇಶಕ್ಕೆ ಕಂಪ್ಯೂಟರ್ ಹಾಗೂ ದೂರವಾಣಿ ತಂತ್ರಜ್ಞಾನದ ಕ್ರಾಂತಿ ತಂದವರು ರಾಜೀವ್ ಗಾಂಧಿ’ ಎಂದರು.

‘ಜೆಡಿಎಸ್ನವರ ಕೊಡುಗೆ ಏನು? ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಏನು? ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಹೊಟ್ಟೆ ತುಂಬಿಸಿದ್ದಾರಾ? ಜಮೀನು ಕೊಟ್ಟಿದ್ದಾರಾ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.