ಟೆಹರಾನ್: 1989ರಿಂದ ಇರಾನ್ನ ಪರಮೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ರಾಷ್ಟ್ರಗಳ ಕಟು ವಿರೋಧಿಯಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ.
.ಖಮೇನಿ ಹತ್ಯೆ ಮಾಡಿದವರು ಪಶ್ಚಾತಾಪ ಪಡಬೇಕು: ಪ್ರತೀಕಾರದ ಪ್ರತಿಜ್ಞೆಗೈದ ಇರಾನ್.
86 ವರ್ಷದ ಧರ್ಮಗುರು ಖಮೇನಿ ಅವರ ಸಾವನ್ನು ಇರಾನ್ ಸರ್ಕಾರಿ ದೂರದರ್ಶನ ಭಾನುವಾರ ಮುಂಜಾನೆ ಖಚಿತಪಡಿಸಿದೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಲಾಗಿದೆ ಎಂದು ಘೋಷಿಸಿದ್ದರು.

ಖಮೇನಿ ಅವರ ಉನ್ನತ ಸಲಹೆಗಾರ ಅಲಿ ಶಮ್ಖಾನಿ ಮತ್ತು ರೆವಲ್ಯೂಷನರಿ ಗಾರ್ಡ್ಸ್ ಮುಖ್ಯಸ್ಥ ಜನರಲ್ ಮೊಹಮ್ಮದ್ ಪಕ್ಪೂರ್ ಕೂಡ ಹತರಾಗಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.
.ಖಮೇನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಸೇರಿ ಹಲವು ಕಡೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ.
ಖಮೇನಿ ಮಗಳು, ಅಳಿಯ ಮತ್ತು ಮೊಮ್ಮಗಳು ಕೂಡ ಮೃತಪಟ್ಟಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಈ ದಾಳಿಗೆ ಪ್ರತಿಯಾಗಿ ಇರಾನ್ ಮಧ್ಯಪ್ರಾಚ್ಯದಾದ್ಯಂತ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಅಬುಧಾಬಿಯಲ್ಲಿ ಕನಿಷ್ಠ ಇಬ್ಬರು ಮತ್ತು ಟೆಲ್ ಅವಿವ್ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

(ವಿವಿಧ ಸುದ್ದಿ ಮೂಲಗಳನ್ನು ಆಧರಿಸಿ ಬರೆದ ಸುದ್ದಿ)
.ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆ: ಡೊನಾಲ್ಡ್ ಟ್ರಂಪ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.