ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ‘ಅವಾಮಿ ಲೀಗ್’ ಪಕ್ಷವನ್ನು ನಿಷೇಧಿಸುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಇಲ್ಲಿನ ಮಧ್ಯಂತರ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.

‘ಭಯೋತ್ಪಾದಕ ಚಟುವಟಿಕೆಗಳು ಮತ್ತು ಸರ್ವಾಧಿಕಾರಿ ಆಡಳಿತ ನಡೆಸಿದ ಆರೋಪದ ಮೇರೆಗೆ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಬೇಕು ಎಂದು ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಕೋರಿಕೆ ಸಲ್ಲಿಸಿವೆ. ಈ ಮನವಿಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ’ ಎಂದು ಮಧ್ಯಂತರ ಸರ್ಕಾರ ತಿಳಿಸಿದೆ.

ಹಸೀನಾ ನೇತೃತ್ವದ ಪಕ್ಷವನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿ ಹೊಸದಾಗಿ ಆರಂಭವಾದ ನ್ಯಾಷನಲ್ ಸಿಟಿಜನ್ ಪಕ್ಷದ ಕಾರ್ಯಕರ್ತರು, ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರ ನಿವಾಸದ ಎದುರು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಬಳಿಕ ಹಸೀನಾ ಅವರ ಪಕ್ಷದ ನಿಷೇಧ ಮಾಡುವ ಕುರಿತ ಸರ್ಕಾರದ ಹೇಳಿಕೆ ಹೊರಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.