ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಮ್ರಾನ್ ಖಾನ್ 5 ವರ್ಷ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ: ಪಾಕ್ ಚುನಾವಣಾ ಆಯೋಗ

Published 9 ಆಗಸ್ಟ್ 2023, 4:50 IST
Last Updated 9 ಆಗಸ್ಟ್ 2023, 4:50 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನ ಚುನಾವಣಾ ಆಯೋಗ ನಿರ್ಬಂಧಿಸಿದೆ.

ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂದ ಉಡುಗೊರೆಯಾಗಿ ಪಡೆದಿದ್ದ ದುಬಾರಿ ವಸ್ತುಗಳನ್ನು ಸರ್ಕಾರಿ ಅಧಿಕಾರಿಗಳಿಗೆ ಮಾರಾಟ ಮಾಡಿದ್ದ ಆರೋಪ ಇಮ್ರಾಖ್‌ ಖಾನ್‌ ವಿರುದ್ಧ ಕೇಳಿಬಂದಿತ್ತು. ಈ (ತೊಶಖಾನ ಭ್ರಷ್ಟಾಚಾರ) ಪ್ರಕರಣದ ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು, ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕೋರ್ಟ್ ಆದೇಶವನ್ನು ಪರಿಗಣಿಸಿ ಸಂವಿಧಾನದ 63 (1)(ಎಚ್‌) ವಿಧಿ ಹಾಗೂ 2017ರ ಚುನಾವಣಾ ಕಾಯ್ದೆಯ 232ನೇ ಸೆಕ್ಷನ್‌ ಅನ್ವಯ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ.

ವಿಚಾರಣಾ ನ್ಯಾಯಾಲಯ ತಮ್ಮ ವಿರುದ್ಧ ನೀಡಿರುವ ತೀರ್ಪನ್ನು ಪ್ರಶ್ನಿಸಿ ಖಾನ್‌, ಇಸ್ಲಾಮಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇಮ್ರಾನ್‌ ಅರ್ಜಿಯ ವಿಚಾರಣೆ ಇಂದು (ಬುಧವಾರ) ನಡೆಯಲಿದೆ.

ಇವನ್ನೂ ಓದಿ
ತೊಶಖಾನ ಪ್ರಕರಣ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ಗೆ 3 ವರ್ಷ ಜೈಲು ಶಿಕ್ಷೆ, ಬಂಧನ
* ಭ್ರಷ್ಟಾಚಾರ ಪ್ರಕರಣ: ತೆರೆದ ಶೌಚಾಲಯ, ತಿಗಣೆಯುಳ್ಳ ಜೈಲು ಕೊಠಡಿಯಲ್ಲಿ ಇಮ್ರಾನ್‌
ಭ್ರಷ್ಟಾಚಾರ ಪ್ರಕರಣ: ತೀರ್ಪಿನ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಇಮ್ರಾನ್ ಖಾನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT