ವಾಷಿಂಗ್ಟನ್ / ಟೆಹರಾನ್: ‘ಕದನ ವಿರಾಮ ಜಾರಿಯಲ್ಲಿದೆ, ದಯಮಾಡಿ ಉಲ್ಲಂಘಿಸಬೇಡಿ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ರುಥ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
.ಸಂಪಾದಕೀಯ | ಇಸ್ರೇಲ್–ಇರಾನ್ ಸಮರಾಂಗಣ; ಅಮೆರಿಕದ ಮಧ್ಯಪ್ರವೇಶ ಅನಪೇಕ್ಷಿತ.
‘ಮಂಗಳವಾರ GMT 04 ಗಂಟೆಗೆ ಆರಂಭವಾದ 24 ಗಂಟೆಗಳ ಹಂತ ಹಂತದ ಕದನ ವಿರಾಮ ಪ್ರಕ್ರಿಯೆ ನಡೆಯಲಿದೆ. ಇರಾನ್ ಎಲ್ಲಾ ಕಾರ್ಯಾಚರಣೆಗಳನ್ನು ಮೊದಲು ಸ್ಥಗಿತಗೊಳಿಸಲಿದೆ. 12 ಗಂಟೆಗಳ ನಂತರ ಇಸ್ರೇಲ್ ಕೂಡ ಇದೇ ಕ್ರಮ ಕೈಗೊಳ್ಳಲಿದೆ‘ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು.

ಈ ಘೋಷಣೆ ಬಳಿಕವೂ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಇಸ್ರೇಲ್ ಖಚಿತ ಪಡಿಸಿದೆ.
.ಇಸ್ರೇಲ್–ಇರಾನ್ ನಡುವೆ ಸಂಪೂರ್ಣ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ.
ಇರಾನ್ ದಾಳಿಯಿಂದ ನಾಲ್ವರು ಸಾವಿಗೀಡಾಗಿದ್ದು, 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕ್ಷಿಪಣಿ ದಾಳಿಯಿಂದಾಗಿ ಕಟ್ಟಡಕ್ಕೆ ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲಿ ತುರ್ತು ಸೇವೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಈ ದಾಳಿ ಬಳಿಕ ‘ಕದನ ವಿರಾಮ’ ಜಾರಿಯಲ್ಲಿದೆ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.
.Israel-Iran War | ಇರಾನ್ ಮೇಲೆ ಅಮೆರಿಕದಿಂದ ‘ಅಪ್ರಚೋದಿತ ಆಕ್ರಮಣ’: ರಷ್ಯಾ ಕಿಡಿ.
ಇದಕ್ಕೂ ಮುನ್ನ, ‘ಇಸ್ರೇಲ್ನ ಆಕ್ರಮಣಕ್ಕೆ ಪ್ರತಿಯಾಗಿ ನಮ್ಮ ಪ್ರಬಲ ಸಶಸ್ತ್ರ ಪಡೆಗಳ ಕಾರ್ಯಾಚರಣೆಗಳು ಬೆಳಿಗ್ಗೆ 4 ಗಂಟೆಯ ಕೊನೆಯ ನಿಮಿಷದವರೆಗೆ ಮುಂದುವರೆದವು’ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದರು.

(ವಿವಿಧ ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
.ಇರಾನ್ ಮೇಲೆ ಅಮೆರಿಕ ದಾಳಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ: ವಿಶ್ವಸಂಸ್ಥೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.