ನ್ಯೂಯಾರ್ಕ್ (ಎಪಿ): ನೀಲಿ ಚಿತ್ರತಾರೆಗೆ ರಹಸ್ಯವಾಗಿ ಹಣ ವರ್ಗಾಯಿಸಿದ್ದ ಪ್ರಕರಣದಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯಾಯಾಧೀಶರು ಜನವರಿ 10ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.

ಈ ಮೂಲಕ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಟ್ರಂಪ್ ಅವರಿಗೆ ಸಂಕಷ್ಟ ಎದುರಾಗಿದೆ.

ಪ್ರಕರಣದಲ್ಲಿ ಟ್ರಂಪ್ ಅವರನ್ನು ಜೈಲಿಗೆ ಕಳುಹಿಸುವ ಸಾಧ್ಯತೆ ಇಲ್ಲ ಎಂದು ನ್ಯಾಯಾಧೀಶರು ಸೂಚ್ಯವಾಗಿ ಹೇಳಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜುವಾನ್ ಎಂ.ಮೆರ್ಷಾನ್ ಅವರು, ‘ಭವಿಷ್ಯದ ಅಧ್ಯಕ್ಷರನ್ನು ಷರತ್ತುಬದ್ಧ ಬಿಡುಗಡೆಗೆ ಒಳಪಡಿಸಿ, ಶಿಕ್ಷೆ ಪ್ರಮಾಣ ಪ್ರಕಟಿಸಲಾಗುವುದು’ ಎಂದು ಲಿಖಿತ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಕರಣವನ್ನು ವಜಾಗೊಳಿಸಲು ಕೋರಿದ್ದ ಟ್ರಂಪ್ ಅವರ ಅರ್ಜಿಯನ್ನು ತಿರಸ್ಕರಿಸಿ, ‘ಪ್ರಕರಣದಲ್ಲಿ ಟ್ರಂಪ್ ಅವರಿಗೆ ಶಿಕ್ಷೆ ವಿಧಿಸಲು ಯಾವುದೇ ಕಾನೂನಾತ್ಮಕ ಅಡ್ಡಿ ಇಲ್ಲ’ ಎಂದು ಹೇಳಿದರು.

ಡೊನಾಲ್ಡ್ ಟ್ರಂಪ್ ಜನವರಿ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.