ಕಠ್ಮಂಡು: ಕಳೆದ ಎರಡು ದಿನಗಳಿಂದ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 25 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ಓಲಿ ಅವರ ರಾಜೀನಾಮೆ ಕೂಡ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿತ್ತು. ಆದರೆ ನೇಪಾಳದಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಸರ್ಕಾರ ಬೀಳುತ್ತದೆ ಎಂದರ್ಥವಲ್ಲ. ನೇಪಾಳದಲ್ಲಿ ಪ್ರಧಾನಮಂತ್ರಿ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದು, ರಾಷ್ಟ್ರಪತಿ ಅವರು ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

ಮೂಲಗಳ ಪ್ರಕಾರ, ರಾಷ್ಟ್ರಪತಿ ರಾಜೀನಾಮೆ ನೀಡುವುದರಿಂದ ಸರ್ಕಾರ ಸಂಪೂರ್ಣವಾಗಿ ಉರುಳಲಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ನಡೆದ ಪ್ರತಿಭಟನೆಯಲ್ಲಿ 25 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ.

ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಯುವಕರು ದೇಶದಾದ್ಯಂತ ‘ಜೆನ್–ಝೀ’ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಿತು.

ಈ ಘಟನೆ ಬಳಿಕ ಸೋಮವಾರ ಕಠ್ಮಂಡು ಸೇರಿದಂತೆ ನೇಪಾಳದೆಲ್ಲಡೆ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ 20 ಮಂದಿ ಮೃತಪಟ್ಟು ನೂರಾರು ಜನರು ಗಾಯಗೊಂಡಿದ್ದರು.

ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಸೋಮವಾರ ತಡರಾತ್ರಿ ಘೋಷಿಸಿದೆ.

ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಿ ನಿಯಂತ್ರಣಕ್ಕೆ ತರಲು ಸರ್ಕಾರವು ಸೇನೆಯನ್ನು ನಿಯೋಜಿಸಿದ್ದು ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ನೇಪಾಳ PM ಓಲಿ ರಾಜೀನಾಮೆಗೆ ಆಗ್ರಹ: ಮನೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು.ನೇಪಾಳ | ಸರ್ಕಾರದ ವಿರುದ್ಧ Gen Z ಕಿಡಿ; ಬಡವರ ಮಕ್ಕಳು ಬೆಳೀಬಾರ್ದಾ ಅಂದ ಯುವಜನತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.