ಇಸ್ಲಾಮಾಬಾದ್: 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕ್ನ ರಾಜಕಾರಣಿಗಳು ಮತ್ತು ಗಣ್ಯ ವ್ಯಕ್ತಿಗಳು ಸರ್ಕಾರವನ್ನು ಕೋರಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಸಮಯದಲ್ಲಿ ನಿರ್ಣಾಯಕ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಸಂಸತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು 2026ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಮಾಡುವುದಾಗಿ ಶುಕ್ರವಾರ ಘೋಷಿಸಿತ್ತು.

ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಸಹಿ ಮಾಡಿದ ಶಿಫಾರಸು ಪತ್ರವನ್ನು ಈಗಾಗಲೇ ನಾರ್ವೆಯ ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಗೆ ಕಳುಹಿಸಲಾಗಿದೆ.

ಆದರೆ ಇರಾನ್ನ ಫೋರ್ಡೊ, ನಟಾನ್ಜ್ ಹಾಗೂ ಎಸ್ಫಹಾನ್ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ಬಾಂಬ್ ದಾಳಿ ನಡೆಸಿತ್ತು. ಆ ಮೂಲಕ ಇಸ್ರೇಲ್-ಇರಾನ್ ನಡುವಣ ಸಂಘರ್ಷದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡಿತ್ತು.

ಹಾಗಾಗಿ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ ನಿರ್ಧಾರವನ್ನು ಪರಿಶೀಲಿಸುವಂತೆ ಕೆಲವು ಪ್ರಮುಖ ರಾಜಕಾರಣಿಗಳು ಸರ್ಕಾರವನ್ನು ಕೋರಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಜಮಿಯತ್ ಉಲೇಮಾ-ಇ-ಇಸ್ಲಾಂ (ಜೆಯುಐ-ಎಫ್) ಮುಖ್ಯಸ್ಥರೂ ಆಗಿರುವ ಹಿರಿಯ ರಾಜಕಾರಣಿ ಮೌಲಾನಾ ಫಜ್ಲುರ್ ರೆಹಮಾನ್, ಸರ್ಕಾರ ತನ್ನ ನಿರ್ಧಾರವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಟ್ರಂಪ್ ಅವರ ಶಾಂತಿ ಪ್ರತಿಪಾದನೆ ಸುಳ್ಳು ಎಂದು ಸಾಬೀತಾಗಿದೆ. ನೊಬೆಲ್ ಪ್ರಶಸ್ತಿಯ ಪ್ರಸ್ತಾಪವನ್ನು ಹಿಂತೆಗೆದುಕೊಳ್ಳಬೇಕು ಎಂದು ಫಜಲ್ ಆಗ್ರಹಿಸಿದ್ದಾರೆ.

ಟ್ರಂಪ್ ಪ್ಯಾಲೆಸ್ಟೀನ್, ಸಿರಿಯಾ, ಲೆಬನಾನ್ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿಯನ್ನು ಬೆಂಬಲಿಸಿದ್ದಾರೆ. ಇದು ಶಾಂತಿಯ ಸಂಕೇತವಾಗಲು ಹೇಗೆ ಸಾಧ್ಯ?. ಅಮೆರಿಕದ ಕೈಯಲ್ಲಿ ಅಫ್ಗನ್ನರು ಮತ್ತು ಪ್ಯಾಲೆಸ್ಟೀನಿಯನ್ನರ ರಕ್ತವಿದ್ದರೆ, ಅವರು ಶಾಂತಿಯ ಪ್ರತಿಪಾದಕರೆಂದು ಹೇಗೆ ಹೇಳಿಕೊಳ್ಳಲು ಸಾಧ್ಯ ಎಂದೂ ಫಜಲ್ ಪ್ರಶ್ನಿಸಿದ್ದಾರೆ.
.ನೊಬೆಲ್ ಶಾಂತಿ ಪ್ರಶಸ್ತಿ: ರೇಸ್ನಲ್ಲಿ ಟ್ರಂಪ್, ಕಿಮ್, ಮೂನ್.
ಟ್ರಂಪ್ ಶಾಂತಿಪ್ರಿಯರಲ್ಲ. ಉದ್ದೇಶಪೂರ್ವಕವಾಗಿ ಮತ್ತು ಕಾನೂನುಬಾಹಿರ ಯುದ್ಧವನ್ನು ಪ್ರಾರಂಭಿದ್ದಾರೆ. ಹಾಗಾಗಿ ಪಾಕಿಸ್ತಾನ ಸರ್ಕಾರವು ಅವರ ನೊಬೆಲ್ ನಾಮನಿರ್ದೇಶನವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸೆನೆಟರ್ ಮುಷಾಹಿದ್ ಹುಸೇನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಯುದ್ಧ ಲಾಬಿ ಬಲೆಗೆ ಬೀಳಿಸಿ ದೊಡ್ಡ ಪ್ರಮಾದ ಎಸಗಿದ್ದಾರೆ ಎಂದೂ ಅವರು ಹೇಳಿದ್ದಾರೆ.

ನಿರ್ಧಾರ ಮರುಪರಿಶೀಲಿಸಿ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಶಾಸಕ ಅಲಿ ಮುಹಮ್ಮದ್ ಖಾನ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ ನಿರ್ಧಾರವನ್ನು ಪಾಕಿಸ್ತಾನ ಹಿಂತೆಗೆದುಕೊಳ್ಳುತ್ತದೆಯೇ ಎಂದು ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಭುಟ್ಟೋ ಪ್ರಶ್ನಿಸಿದ್ದಾರೆ.
.ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.