ವಾಷಿಂಗ್ಟನ್: ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ವ್ಯವಸ್ಥೆ ಬಲಪಡಿಸುವುದು, ವಾಣಿಜ್ಯ-ವ್ಯಾಪಾರ, ಇಂಧನ, ಮೂಲಸೌಕರ್ಯ, ತಂತ್ರಜ್ಞಾನ ವೃದ್ಧಿ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ.

ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಉಭಯ ನಾಯಕರು ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಓವಲ್ ಕಚೇರಿಯಲ್ಲಿ ಪ್ರಧಾನಿ ಮೋದಿ ಅವರನ್ನು ತಬ್ಬಿಕೊಂಡು ಟ್ರಂಪ್ ಬರಮಾಡಿಕೊಂಡರು. 'ನಿಮ್ಮನ್ನು ಭೇಟಿಯಾಗಲು ಖುಷಿಯಾಗುತ್ತಿದೆ. ನೀವು ನನ್ನ ಬಹುಕಾಲದ ಉತ್ತಮ ಸ್ನೇಹಿತ' ಎಂದು ಟ್ರಂಪ್ ಗುಣಗಾನ ಮಾಡಿದ್ದಾರೆ. ಟ್ರಂಪ್ ಮೊದಲ ಅವಧಿಯಲ್ಲಿ ಭಾರತ-ಅಮೆರಿಕ ಉತ್ತಮ ಬಾಂಧವ್ಯದ ಕುರಿತಾಗಿಯೂ ಮೆಲುಕು ಹಾಕಿದ್ದಾರೆ.

ಟ್ರಂಪ್ ಭೇಟಿಗೂ ಮುನ್ನ ಪ್ರಧಾನಿ ಮೋದಿ ಅವರು, ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ಜ್, ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬಾರ್ಡ್, ಉದ್ಯಮಿ ದಿಗ್ಗಜ ಇಲಾನ್ ಮಸ್ಕ್, ರಿಪಬ್ಲಿಕನ್ ನಾಯಕ ವಿವೇಕ್ ರಾಮಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಎರಡನೇ ಅವಧಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ಮೋದಿ ಅಮೆರಿಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿಯು ಭಾರತ ಹಾಗೂ ಅಮೆರಿಕ ನಡುವಣ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 'ಅವರ್ ಜರ್ನಿ ಟುಗೇದರ್' ಪುಸ್ತಕವನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದರು. 'ಹೌಡಿ ಮೋಡಿ' ಹಾಗೂ 'ನಮಸ್ತೆ ಟ್ರಂಪ್' ಕಾರ್ಯಕ್ರಮದ ಹಲವು ಚಿತ್ರಗಳನ್ನು ಟ್ರಂಪ್ ತೋರಿಸಿಕೊಟ್ಟರು.
.ಮೋದಿ ಅಮೆರಿಕ ಪ್ರವಾಸ: ಗುಪ್ತಚರ ನಿರ್ದೇಶಕಿ ಭೇಟಿ; ಭಯೋತ್ಪಾದನೆ ನಿಗ್ರಹಕ್ಕೆ ಪಣ.ಅಮೆರಿಕದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಲಿರುವ ಡೊನಾಲ್ಡ್ ಟ್ರಂಪ್–ನರೇಂದ್ರ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.