ನವದೆಹಲಿ/ಢಾಕಾ: ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ.

ಫೆಬ್ರುವರಿ 17ರಂದು ಢಾಕಾದಲ್ಲಿರುವ ಬಾಂಗ್ಲಾದೇಶ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ಪ್ರಮಾಣವಚನ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಆಹ್ವಾನಿತ ರಾಷ್ಟ್ರಗಳಲ್ಲಿ ಭಾರತವೂ ಪ್ರಮುಖವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
.ತಾರಿಕ್ ರೆಹಮಾನ್: 20 ವರ್ಷಗಳ ಅಜ್ಞಾತವಾಸ, ದೇಶಕ್ಕೆ ಬಂದ ಎರಡೇ ತಿಂಗಳಿಗೆ ಪ್ರಧಾನಿ.ಬಾಂಗ್ಲಾದೇಶವು ಮುಸ್ಲಿಂ, ಹಿಂದೂ, ಕ್ರೈಸ್ತ ಎಲ್ಲರಿಗೂ ಸೇರಿದೆ: ತಾರಿಕ್ ರೆಹಮಾನ್.
ಬಾಂಗ್ಲಾದಲ್ಲಿ ಮಹತ್ವದ ರಾಜಕೀಯ ಘಟ್ಟಕ್ಕೆ ವೇದಿಕೆ ಸಜ್ಜಾಗಿದ್ದು ತಾರಿಕ್ ರೆಹಮಾನ್ ಮುಂದಿನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಬಿಎನ್ಪಿ ಪಕ್ಷ ಮತ್ತೆ ಅಧಿಕಾರಕ್ಕೆ ವಾಪಸ್ಸಾಗಲಿದೆ.

ಫೆ.17ರಂದು ಹೊಸದಾಗಿ ಆಯ್ಕೆಯಾದ ಸಂಸದರಿಂದ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ನಂತರ ಪ್ರಧಾನಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಾರಿಕ್ ರೆಹಮಾನ್ ಅವರಿಗೆ ಮುಖ್ಯ ಚುನಾವಣಾ ಆಯುಕ್ತ ನಾಸೀರ್ ಉದ್ದೀನ್ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಬಿಎನ್ಪಿ ಮೂಲಗಳು ತಿಳಿಸಿವೆ.

ಫೆ.17 ಬಾಂಗ್ಲಾದೇಶದ ಐತಿಹಾಸಿಕ ದಿನ ಎಂದು ಬಿಎನ್ಪಿ ಪಕ್ಷದ ವಕ್ತಾರರು ಹೇಳಿದ್ದಾರೆ. ಚುನಾವಣಾ ಪ್ರಕ್ರಿಯೆಯ ಬಳಿಕ ಹೊಸ ಸರ್ಕಾರ ರಚನೆಯಾಗುತ್ತಿರುವುದು ದೇಶದ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಢಾಕಾಗೆ ಆಗಮಿಸಲಿರುವ ದಕ್ಷಿಣ ಏಷ್ಯಾ ನಾಯಕರ ಉಪಸ್ಥಿತಿಯು ವಿಶೇಷ ಎಂದು ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
.ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ.ಪುಲ್ವಾಮಾ ದಾಳಿಗೆ ಏಳು ವರ್ಷ: ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.