ವಾಷಿಂಗ್ಟನ್: ವಿವಿಧ ದೇಶಗಳ ಮೇಲೆ ಸುಂಕ ವಿಧಿಸಿ ಹೊರಡಿಸಲಾಗಿರುವ ಆದೇಶವನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ರದ್ದು ಮಾಡಿದಲ್ಲಿ, ಅಮೆರಿಕದ ಮೇಲೆ ಭಾರಿ ಪರಿಣಾಮ ಉಂಟು ಮಾಡಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

‘ಹಲವು ದೇಶಗಳ ಮೇಲೆ ಭಾರಿ ಪ್ರಮಾಣದಲ್ಲಿ ಸುಂಕ ವಿಧಿಸಿ, ಸಂಗ್ರಹಿಸಿರುವ ಹಣವನ್ನು ಮರಳಿ ಕೊಡಲು ಕಷ್ಟವಾಗಲಿದೆ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

‘ನ್ಯಾಯಾಲಯದ ತೀರ್ಪು ವ್ಯತಿರಿಕ್ತವಾಗಿ ಬಂದರೆ ನಾವು ಗೊಂದಲಕ್ಕೆ ಒಳಗಾಗಬೇಕಾಗುತ್ತದೆ. ಭಾರಿ ಮೊತ್ತವನ್ನು ಮರುಪಾವತಿ ಮಾಡಬೇಕಾಗುತ್ತದೆ. ನಾವು ಯಾರಿಗೆ, ಯಾವಾಗ, ಎಷ್ಟು ಪಾವತಿಸಬೇಕಾಗುತ್ತದೆ ಎಂಬುವುದನ್ನು ಲೆಕ್ಕ ಹಾಕಲು ಎಷ್ಟೋ ವರ್ಷಗಳು ಬೇಕಾಗುತ್ತವೆ’ ಎಂದೂ ಅವರು ಹೇಳಿದ್ದಾರೆ.