ಕೀವ್: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಪರಸ್ಪರರು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಬಾರದು ಎಂಬ ನಿರ್ಧಾರಕ್ಕೆ ಉಕ್ರೇನ್ ಸಮ್ಮತಿ ನೀಡಿದೆ.

ಉಕ್ರೇನ್ ಮತ್ತು ರಷ್ಯಾ ನಡುವಿನ ಕದನ ವಿರಾಮಕ್ಕಾಗಿ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಸೌದಿ ಅರೇಬಿಯಾ ರಾಜಧಾನಿ ರಿಯಾದ್ನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಾತುಕತೆ ನಡೆದಿತ್ತು.

ಇದರ ಬೆನ್ನಲ್ಲೇ, ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ‘ಅಮೆರಿಕ ಸಂಧಾನಕಾರರು ಹೇಳಿದಂತೆ ಇಂಧನ ಮೂಲಸೌಕರ್ಯದ ಮೇಲೆ ದಾಳಿ ನಡೆಸದಿರಲು ನಮ್ಮ ಒಪ್ಪಿಗೆ ಇದೆ. ಆದರೆ, ಒಂದು ವೇಳೆ ಉಕ್ರೇನ್ನ ಇಂಧನ ಮೂಲಸೌಕರ್ಯಗಳ ಮೇಲೆ ರಷ್ಯಾ ದಾಳಿ ನಡೆಸಿದ್ದೇ ಆದಲ್ಲಿ, ಅದಕ್ಕೆ ತಕ್ಕ ಪ್ರತೀಕಾರ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.