ಬೆಂಗಳೂರು: ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ.

ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ ಎಂದು ಬೆಂಗಳೂರಿನ ಕೆ.ಆರ್.ಪುರಂ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (2) ಷಡಕ್ಷರಿ ಗೋಪಾಲ ರೆಡ್ಡಿ ಹೇಳಿದ್ದಾರೆ. ಉತ್ತಪ್ಪ ಸುಮಾರು ₹ 23 ಲಕ್ಷ ವಂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಗೋಪಾಲ ರೆಡ್ಡಿ ಅವರು ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಉತ್ತಪ್ಪ ಅವರು ಸೆಂಚುರೀಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ನಿರ್ದೇಶಕರಾಗಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಇಪಿಎಫ್ ಹಣ ಪಾವತಿಸಿಲ್ಲ. ಸಂಬಳದಲ್ಲಿ ಇಪಿಎಫ್ ಹಣ ಕಡಿತಗೊಳಿಸಿಕೊಂಡು, ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿದ್ದಾರೆ ಎಂಬ ಆರೋಸಿಸಲಾಗಿದೆ.

ದೂರಿನ ಅನ್ವಯ ಉತ್ತಪ್ಪ ಅವರ ವಿಳಾಸಕ್ಕೆ ಪೊಲೀಸರು ತೆರಳಿದ್ದು, ಅವರು ಸದ್ಯ ಆ ವಿಳಾಸದಲ್ಲಿ ವಾಸವಿಲ್ಲ ಎಂದು ತಿಳಿದು ಬಂದಿದೆ. ಅವರು ಒಂದು ವರ್ಷದ ಹಿಂದೆಯೇ ಅಲ್ಲಿಯ ಮನೆಯನ್ನು ಖಾಲಿ ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪುಲಕೇಶಿನಗರ ಪೊಲೀಸರು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಿಷ್ಯ ನಿಧಿ ಪ್ರಾಧಿಕಾರವು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.
.ಖಿನ್ನತೆಯಿಂದ ಬಳಲಿದ ದಿನಗಳನ್ನು ಹಂಚಿಕೊಂಡ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ .ಟೆಸ್ಟ್ನಲ್ಲಿ ರಾಹುಲ್, ಅಭಿಮನ್ಯು ಉತ್ತಮ ಆರಂಭ ನೀಡಬಲ್ಲರು: ರಾಬಿನ್ ಉತ್ತಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.