ಹೈದರಾಬಾದ್ : ಎರಡೂವರೆ ತಿಂಗಳ ನಂತರ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿರುವ ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಮಂಗಳವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಸಿ ಗುಂಪಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅಜೇಯ 77 ರನ್ (42ಎ, 7x4, 4x6) ಗಳಿಸಿದರು. ಅವರ ಬ್ಯಾಟಿಂಗ್ ನೆರವಿನಿಂದ ಬರೋಡಾ ತಂಡವು ಏಳು ವಿಕೆಟ್ಗಳ ಜಯ ಸಾಧಿಸಿತು.

ಅಭಿಷೇಕ್ ಶರ್ಮಾ (50; 19ಎ) ಮತ್ತು ಅನ್ಮೋಲ್ ಪ್ರೀತ್ ಸಿಂಗ್ (69;32ಎ) ಅವರ ಮಿಂಚಿನ ಅರ್ಧಶತಕಗಳ ನೆರವಿನಿಂದ ಪಂಜಾಬ್ ತಂಡವು ನಿಗದಿತ ಓವರ್ಗಳಲ್ಲಿ 8 ವಿಕೆಟ್ಗೆ 222 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬರೋಡಾ ತಂಡವು 5 ಎಸೆತ ಬಾಕಿ ಇರುವಂತೆ ಮೂರು ವಿಕೆಟ್ಗೆ 244 ರನ್ ಗಳಿಸಿ ಜಯ ಗಳಿಸಿತು.

ಸೆಪ್ಟೆಂಬರ್ 26ರಂದು ಶ್ರೀಲಂಕಾ ವಿರುದ್ಧ ದುಬೈನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಅವರು ಎಡ ಕ್ವಾಡ್ರೈಸ್ಪ್ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದರು.

ಬ್ಯಾಟಿಂಗ್ ಮಾತ್ರವಲ್ಲ, ಬೌಲಿಂಗ್ನಲ್ಲೂ 4 ಓವರ್ ಬಳಿಕ ಹಾರ್ದಿಕ್ 52 ರನ್ ಬಿಟ್ಟುಕೊಟ್ಟು 1 ವಿಕೆಟ್ ಪಡೆದರು. ಅವರ ಈ ಪ್ರದರ್ಶನ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡುವ ಅವಕಾಶವನ್ನು ಹೆಚ್ಚಿಸಿದೆ.
.SMAT | ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಇತಿಹಾಸ ನಿರ್ಮಿಸಿದ 14 ವರ್ಷದ ಪೋರ.ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್, ಬೂಮ್ರಾ ಹೊರಗುಳಿಯುವ ಸಾಧ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.