ಕೋಲ್ಕತ್ತ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಭಾರತ ತಂಡವು 30 ರನ್ಗಳ ಸೋಲನುಭವಿಸಿದೆ.

ಪಂದ್ಯದ ಮೂರನೇ ದಿನ ಉಭಯ ತಂಡಗಳ ಬೌಲರ್ಗಳು ಮೇಲುಗೈ ಸಾಧಿಸಿದರು. ಮೊದಲ ಇನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಿದ್ದ ಭಾರತವು, ಎರಡನೇ ಇನಿಂಗ್ಸ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 153 ರನ್ಗಳಿಗೆ ಅಲೌಟ್ ಮಾಡುವಲ್ಲಿ ಸಫಲವಾಯಿತು.

ಎರಡನೇ ಇನಿಂಗ್ಸ್ನಲ್ಲಿ 124 ರನ್ಗಳ ಸುಲಭ ಗುರಿ ಬೆನ್ನತ್ತಿದ ಭಾರತ ತಂಡದವು ಬ್ಯಾಟಿಂಗ್ ವೈಫಲ್ಯ ಅನುಭವಿಸಿತು.

124 ರನ್ಗಳ ಗುರಿ ಬೆನ್ನತ್ತಿದ್ದ ಭಾರತ ತಂಡಕ್ಕೆ, ದಕ್ಷಿಣ ಆಫ್ರಿಕಾ ಬೌಲರ್ಗಳು ಮೊದಲ ಓವರ್ನಿಂದಲೇ ಕಾಡಿದರು. ಬೌಲರ್ಗಳಿಗೆ ನೆರವು ನೀಡುತ್ತಿದ್ದ ಪಿಚ್ನಲ್ಲಿ ಸೈಮನ್ ಹಾರ್ಮರ್ 4 ವಿಕೆಟ್, ಮಾರ್ಕೊ ಯಾನ್ಸನ್ ಹಾಗೂ ಕೇಶವ ಮಹಾರಾಜ್ ತಲಾ 2 ವಿಕೆಟ್ ಪಡೆಯುವ ಮೂಲಕ ಮಿಂಚಿದರು.

ಭಾರತದ ಪರ ಎರಡನೇ ಇನಿಂಗ್ಸ್ನಲ್ಲಿ ವಾಷಿಂಗ್ಟನ್ ಸುಂದರ್ (31 ರನ್) ಹಾಗೂ ಅಕ್ಷರ್ ಪಟೇಲ್ (26 ರನ್) ಕೆಲ ಕಾಲ ಪ್ರತಿರೋಧ ತೋರಿದರೂ, ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

ಮೊದಲ ಇನಿಂಗ್ಸ್ನಲ್ಲಿ ದಕ್ಷಿಣ ಆಫ್ರಿಕಾ ತಂಡ 159 ರನ್ ಗಳಿಸಿತ್ತು. ಅದಕ್ಕುತ್ತರವಾಗಿ ಭಾರತ ತಂಡ 189 ರನ್ ಗಳಿಸಿ 30 ರನ್ ಮುನ್ನಡೆ ಪಡೆದಿತ್ತು.

ಮೊದಲ ಟೆಸ್ಟ್ ಗೆಲ್ಲುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು 0–1 ಮುನ್ನಡೆ ಸಾಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.