ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಗೆ ಮರುಭೂಮಿ ನಾಡಿನ ನಗರಿ ಸಿದ್ಧವಾಗಿದೆ. ದೆಹಲಿ ಹುಡುಗ ರಿಷಭ್ ಪಂತ್ ಅವರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಾವೆಲ್ಲ ಆಟಗಾರರನ್ನು ಖರೀದಿಸಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.