ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾದಲ್ಲಿ ಮಕ್ಕಳ ಸಾವು: ಹಿಂಸಾಚಾರವನ್ನು ಕೊನೆಗಾಣಿಸುವಂತೆ ಇರ್ಫಾನ್ ಪಠಾಣ್ ಮನವಿ

Published 3 ನವೆಂಬರ್ 2023, 9:46 IST
Last Updated 3 ನವೆಂಬರ್ 2023, 9:46 IST
ಅಕ್ಷರ ಗಾತ್ರ

ಬೆಂಗಳೂರು: ಇಸ್ರೇಲ್ ಹಾಗೂ ಹಮಾಸ್ ನಡುವಣ ಯುದ್ಧದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಗಾಜಾಪಟ್ಟಿಯಲ್ಲಿ ಅನೇಕ ಮಕ್ಕಳು ಸಾವಿಗೀಡಾಗಿದ್ದಾರೆ.

ಈ ಕುರಿತು ಧ್ವನಿ ಎತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ವಿಶ್ವ ನಾಯಕರು ತಕ್ಷಣ ಕಾರ್ಯಪ್ರವೃತರಾಗಬೇಕು ಎಂದು ಬೇಡಿಕೊಂಡಿದ್ದಾರೆ.

ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇಡೀ ಜಗತ್ತೇ ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ ನನಗೆ ನನ್ನ ಅಭಿಪ್ರಾಯ ಮಂಡಿಸಲು ಮಾತ್ರ ಸಾಧ್ಯ. ಆದರೆ ವಿಶ್ವ ನಾಯಕರು ಒಂದಾಗಿ ಈ ಪ್ರಜ್ಞಾಹೀನ ಹತ್ಯೆಯನ್ನು ತಕ್ಷಣ ಕೊನೆಗಾಣಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.

ಇಸ್ರೇಲ್‌ ಹಾಗೂ ಹಮಾಸ್ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೆ 18 ವರ್ಷದೊಳಗಿನ 3,760 ಪ್ಯಾಲೆಸ್ಟೀನ್ ಮಕ್ಕಳು ಮೃತಪಟ್ಟಿದ್ದಾರೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT