ಕೊಲೊಂಬೊ: ಇಲ್ಲಿನ ಆರ್. ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ಗೆಲುವಿಗೆ 176 ರನ್ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ಆದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್ (77 ರನ್, 40ಎ, 4X10, 6X2) ಕಲೆಹಾಕುವ ಮೂಲಕ ಭಾರತ ಉತ್ತಮ ರನ್ ಕಲೆಹಾಕಲು ನೆರವಾದರು.

ನಂತರ ಬಂದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ತಾಳ್ಮೆಯ ಇನಿಂಗ್ಸ್ ಆಡಿದರು. ಅಂತಿಮವಾಗಿ ಶಿವಂ ದುಬೆ ಹಾಗೂ ರಿಂಕು ಸಿಂಗ್ ಸ್ಪೋಟಕ ಬ್ಯಾಟಿಂಗ್ ಆಡುವ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಪಾಕಿಸ್ತಾನ ಪರ ಅಮೋಘ ಬೌಲಿಂಗ್ ದಾಳಿ ನಡೆಸಿದ ಸೈಮ್ ಅಯುಬ್ 3 ವಿಕೆಟ್ ಪಡೆದು ಮಿಂಚಿದರು. ಸಲ್ಮಾನ್ ಆಘಾ, ಶಹೀನ್ ಅಫ್ರಿದಿ ಹಾಗೂ ಉಸ್ಮಾನ್ ತಾರಿಕ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.