ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐಸಿಐಸಿಐ ಬ್ಯಾಂಕ್‌ಗೆ ₹11,696 ಕೋಟಿ ಲಾಭ

Published : 27 ಜುಲೈ 2024, 15:12 IST
Last Updated : 27 ಜುಲೈ 2024, 15:12 IST
ಫಾಲೋ ಮಾಡಿ
Comments

ಮುಂಬೈ: ದೇಶದ ಖಾಸಗಿ ವಲಯದ ಎರಡನೇ ಅತಿದೊಡ್ಡ ಬ್ಯಾಂಕ್‌ ಆಗಿರುವ ಐಸಿಐಸಿಐ ಬ್ಯಾಂಕ್‌, 2024–25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹11,696 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹10,636 ಕೋಟಿ ಲಾಭ ಗಳಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 9.96ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್‌ ಶನಿವಾರ ತಿಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹38,763 ಕೋಟಿ ವರಮಾನಗಳಿಸಿತ್ತು. ಈ ಬಾರಿ ₹45,998 ಕೋಟಿ ಗಳಿಸಿದೆ. ವೆಚ್ಚದ ಪ್ರಮಾಣವು ₹29,973 ಕೋಟಿ ಆಗಿದೆ.

ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹1,292 ಕೋಟಿಯಿಂದ 1,332 ಕೋಟಿಗೆ ಏರಿಕೆಯಾಗಿದೆ. 2023–24ನೇ ಮಾರ್ಚ್ ತ್ರೈಮಾಸಿಕದಲ್ಲಿ ಈ ಮೊತ್ತವು ₹718 ಕೋಟಿ ಇತ್ತು.

ಬ್ಯಾಂಕ್‌ನ ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಸ್ಥಿರವಾಗಿದ್ದು, ಶೇ 2.36ರಷ್ಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT