ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಜಿಡಿಪಿ ಬೆಳವಣಿಗೆ ಶೇ 6.2ರಷ್ಟು ಆಗಲಿದೆ: ಇಂಡಿಯಾ ರೇಟಿಂಗ್ಸ್‌

Published 20 ಸೆಪ್ಟೆಂಬರ್ 2023, 11:35 IST
Last Updated 20 ಸೆಪ್ಟೆಂಬರ್ 2023, 11:35 IST
ಅಕ್ಷರ ಗಾತ್ರ

ಮುಂಬೈ: ಇಂಡಿಯಾ ರೇಟಿಂಗ್ಸ್‌ ಆ್ಯಂಡ್‌ ರಿಸರ್ಚ್‌ ಸಂಸ್ಥೆಯು ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಪ್ರಸಕ್ತ ಹಣಕಾಸು ವರ್ಷಕ್ಕೆ ಪರಿಷ್ಕರಣೆ ಮಾಡಿದ್ದು, ಶೇ 6.2ರಷ್ಟು ಆಗಲಿದೆ ಎಂದು ಹೇಳಿದೆ. ಈ ಮೊದಲು ಜಿಡಿಪಿ ಬೆಳವಣಿಗೆಯು ಶೇ 5.9ರಷ್ಟು ಆಗಲಿದೆ ಎನ್ನುವ ಅಂದಾಜನ್ನು ಸಂಸ್ಥೆ ಮಾಡಿತ್ತು.

ಕೇಂದ್ರ ಸರ್ಕಾರದ ಬಂಡವಾಳ ವೆಚ್ಚ, ಭಾರತದ ಕಂಪನಿಗಳು ಮತ್ತು ಬ್ಯಾಂಕ್‌ಗಳ ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು, ಜಾಗತಿಕ ಮಟ್ಟದಲ್ಲಿ ಸರಕುಗಳ ದರ ಇಳಿಕೆ ಹಾಗೂ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗುತ್ತಿರುವ ಅಂಶಗಳನ್ನು ಗಮದನಲ್ಲಿ ಇಟ್ಟುಕೊಂಡು ಸಂಸ್ಥೆಯು ಜಿಡಿಪಿ ಬೆಳವಣಿಗೆ ಅಂದಾಜನ್ನು ಪರಿಷ್ಕರಣೆ ಮಾಡಿದೆ.

ಆದರೆ, ಜಾಗತಿಕ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿ ಇರುವುದರಿಂದ ಭಾರತದ ರಫ್ತು ಇಳಿಕೆ ಕಾಣುತ್ತಿದೆ. ಮುಂಗಾರು ಮಳೆಯ ಕೊರತೆ ಮತ್ತು ತಯಾರಿಕಾ ವಲಯದ ಬೆಳವಣಿಗೆ ಮಂದಗತಿಯಲ್ಲಿ ಇರುವುದು ದೇಶದ ಆರ್ಥಿಕ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೂ ಇಂಡಿಯಾ ರೇಟಿಂಗ್ಸ್‌ ಹೇಳಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT