ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2024: ಬಜೆಟ್‌ನಲ್ಲಿ ಬಳ್ಳಾರಿಗೆ ಸಿಕ್ಕಿದ್ದೇನು?

Published 16 ಫೆಬ್ರುವರಿ 2024, 14:09 IST
Last Updated 16 ಫೆಬ್ರುವರಿ 2024, 14:09 IST
ಅಕ್ಷರ ಗಾತ್ರ

ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ್ದಾರೆ.

1. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೈತ್ಯಾಗಾರ ನಿರ್ಮಾಣ 

2. ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೊ ಸಿಎನ್‌ಜಿ ಕೇಂದ್ರ ಸ್ಥಾಪಿಸಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸುವ ಚಿಂತನೆ

3. ಜಿಲ್ಲೆಯಲ್ಲಿ ತಾಯಿ ಹಾಲು ಬ್ಯಾಂಕ್‌ ಸ್ಥಾಪನೆಗೆ ಕ್ರಮ

4. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ ಸ್ಥಾಪನೆ

5. ಬಳ್ಳಾರಿಯಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ, ನಬಾರ್ಡ್‌ ನೆರವಿನೊಂದಿಗೆ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪನೆ

6 . ಬಳ್ಳಾರಿ ನಗರದ ಸಮೀಪ ಇಂಟಿಗ್ರೇಟೆಡ್ ಟೌನ್‌ಶಿಪ್‌ ಅಭಿವೃದ್ಧಿ

7. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪೆರಲ್‌ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ

8. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ ₹10 ಕೋಟಿ ಒದಗಿಸಲು ಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT