ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಬಂಧನ

Published 27 ನವೆಂಬರ್ 2023, 2:26 IST
Last Updated 27 ನವೆಂಬರ್ 2023, 2:26 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯ ಭಾಗ್ಯ ನಗರದ 9ನೇ ಕ್ರಾಸ್ ಮನೆಯಲ್ಲಿ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಅವರನ್ನು ಟಿಳಕವಾಡಿ ಠಾಣೆ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.

'ಮೊಬೈಲ್ ಟವರ್ ಅಳವಡಿಸುವುದನ್ನು ತಡೆಯುವ ಜತೆಗೆ, ರಮೇಶ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅಭಿಜಿತ ಬಂಧಿಸಲಾಗಿದೆ' ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.

ಮೊಬೈಲ್ ಟವರ್ ಅಳವಡಿಕೆ ವಿಚಾರವಾಗಿ ನ.23ರಂದು ಪರಸ್ಪರರ ಮಧ್ಯೆ ಗಲಾಟೆ ನಡೆದಿತ್ತು. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ಪೊಲೀಸರು, ರಮೇಶ ಪಾಟೀಲ ಅವರನ್ನು ಅಂದೇ ಬಂಧಿಸಿದ್ದರು.

ಅಭಿಜಿತ ಅವರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಕಾರ್ಯಕರ್ತರು ಭಾನುವಾರ ಸಂಜೆ ಟಿಳಕವಾಡಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜಿತ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT