ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ

Published 29 ಡಿಸೆಂಬರ್ 2023, 6:02 IST
Last Updated 29 ಡಿಸೆಂಬರ್ 2023, 6:02 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಬಂಧನ ಖಂಡಿಸಿ, ನಗರದಲ್ಲಿ ವಿವಿಧ ಕನ್ನಡ ಸಂಘಟನೆಯವರು ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿ ಧ್ವನಿ ಎತ್ತಿದ ನಾರಾಯಣಗೌಡ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

ಟೈಯರ್‌ಗೆ ಬೆಂಕಿ ಹಚ್ಚಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆಗ ಪೊಲೀಸರು ಮತ್ತು ಕಾರ್ಯಕರ್ತರ ನೂಕಾಟ, ತಳ್ಳಾಟ ನಡೆಯಿತು. ಆರ್‌.ಅಭಿಲಾಷ, ವಾಜೀದ್‌ ಹಿರೇಕೋಡಿ, ಕಸ್ತೂರಿ ಭಾವಿ, ಮಹೇಶ ಶೀಗಿಹಳ್ಳಿ ನೇತೃತ್ವ ವಹಿಸಿದ್ದರು.

ಪಾಲಿಕೆ ಮುಂದೆ ಪ್ರತಿಭಟನೆ:

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮರಾಠಿ ಹಿಂದಿ ಭಾಷೆಯಲ್ಲೇ ಚರ್ಚೆ ನಡೆಸಿ ಕನ್ನಡ ಕಡೆಗಣಿಸಿದ್ದಾರೆ’ ಎಂದು ಆರೋಪಿಸಿ ಪಾಲಿಕೆ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಅಭಿಲಾಷ ಪ್ರೇಮ ಚೌಗಲಾ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT