ಬೆಳಗಾವಿ: ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಪಾಲಕರೊಬ್ಬರಿಗೆ ನಗರ ಪೊಲೀಸರು ಗುರುವಾರ ₹25 ಸಾವಿರ ದಂಡ ವಿಧಿಸಿದ್ದಾರೆ. ಈ ಪ್ರಕರಣದ ರಸೀದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಉಳಿದ ಪಾಲಕರಿಗೂ ಎಚ್ಚರಿಕೆ ಕೊಟ್ಟಿದ್ದಾರೆ.
ನಗರದಲ್ಲಿ ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರಗಳ ವಾಹನಗಳನ್ನು ಚಲಾಯಿಸಲು ಅವಕಾಶ ನೀಡುವುದು ಕೆಲವು ಪಾಲಕರು ಶೋಕಿಯಾಗಿ ಮಾರ್ಪಟ್ಟಿದೆ. ಹಾಗಾಗಿ ಮೋಟಾರು ವಾಹನ ಕಾಯ್ದೆ ಉಲ್ಲಂಘಿಸಿದ ಆರೋಪದಡಿ ಈ ಕ್ರಮ ಕೈಗೊಂಡಿದ್ದಾರೆ.