ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಂತ ಹಣದಿಂದ ಪ್ರಯಾಣ: ಹಿದಾಯತ್ ಉಲ್ಲಾ

Published 31 ಡಿಸೆಂಬರ್ 2023, 15:41 IST
Last Updated 31 ಡಿಸೆಂಬರ್ 2023, 15:41 IST
ಅಕ್ಷರ ಗಾತ್ರ

ಬೆಂಗಳೂರು: ‘ಸಚಿವರು ಇಲಾಖಾ ಕಾರ್ಯಕ್ರಮ ಹಾಗೂ ಕೋವಿಡ್ ಸಭೆಗಳಲ್ಲಿ ನಿರತರಾಗಿದ್ದರಿಂದ ಅವರ ಉಸ್ತುವಾರಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತೆರಳಿದ್ದೆ. ಈ ಪ್ರಯಾಣದ ವೆಚ್ಚವನ್ನು ಸ್ವಂತ ಹಣದಿಂದಲೇ ಭರಿಸಿದ್ದೇನೆ’ ಎಂದು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ (ಪಿ.ಎಸ್‌) ಕೆ.ಎ.ಹಿದಾಯತ್‌ ಉಲ್ಲಾ ತಿಳಿಸಿದ್ದಾರೆ.

‘ಕರ್ತವ್ಯ ನಿಮಿತ್ತ ಪ್ರವಾಸದ ವೇಳಾಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿತ್ತು. ಸರ್ಕಾರದಿಂದ ವೆಚ್ಚ ಭರಿಸಿಕೊಳ್ಳುವ ಉದ್ದೇಶ ಇಲ್ಲ’ ಎಂದು ತಿಳಿಸಿದ್ದಾರೆ.

‘ಸಚಿವರ ಪಿ.ಎಸ್‌ಗೆ ಸರ್ಕಾರದಲ್ಲಿ ಪ್ರಯಾಣ ಭತ್ಯೆಯನ್ನು ಮರುಪಾವತಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಇದುವರೆಗೂ ಯಾವುದೇ ವೆಚ್ಚ ಪಡೆದಿಲ್ಲ’ ಎಂದು ಹೇಳಿದ್ದಾರೆ.

‘ಪ್ರವಾಸದ ವಿವರವನ್ನು ನೀಡದೇ ಅಧಿಕಾರಿಗಳು ಪ್ರವಾಸ ಕೈಗೊಳ್ಳುವುದು ಸರ್ಕಾರದ ನಿಯಮಕ್ಕೆ ವಿರುದ್ಧವಾದದ್ದು. ಆ ಕಾರಣಕ್ಕಾಗಿಯೇ ನಾನು ಸರ್ಕಾರಕ್ಕೆ ಮಾಹಿತಿ ನೀಡಿ ಪ್ರವಾಸ ಕೈಗೊಂಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT