ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಿಗೆ ಬಾಂಬ್ ಬೆದರಿಕೆ: ಇಂಟರ್‌ಪೊಲ್, ಸಿಬಿಐಗೆ ಪತ್ರ

Published 5 ಡಿಸೆಂಬರ್ 2023, 16:24 IST
Last Updated 5 ಡಿಸೆಂಬರ್ 2023, 16:24 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಕೆಲ ಮಾಹಿತಿ ಕೋರಿ ಸಿಬಿಐ ಹಾಗೂ ಇಂಟರ್‌ಪೋಲ್‌ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಬಾಂಬ್ ಬೆದರಿಕೆ ಇ–ಮೇಲ್ ಸಂಬಂಧ ಒಟ್ಟು 27 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಗೆ ಅಗತ್ಯವಿರುವ ಮಾಹಿತಿ ಕೋರಿ ಇಂಟರ್‌ಪೋಲ್ ಹಾಗೂ ಸಿಬಿಐಗೆ ಪತ್ರ ಬರೆಯಲಾಗಿದೆ’ ಎಂದರು.

‘2022ರ ಏಪ್ರಿಲ್ 8ರಂದು ನಗರದ 16 ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿತ್ತು. ಈ ಪ್ರಕರಣಗಳಿಗೂ ಇದೀಗ ಬೆದರಿಕೆ ಬಂದಿರುವ ಇ–ಮೇಲ್‌ಗಳಿಗೂ ಹೋಲಿಕೆ ಕಂಡುಬರುತ್ತಿದೆ. ಇದೇ ಮಾದರಿಯಲ್ಲಿ ಅಮೆರಿಕ, ಜರ್ಮನಿ, ಮಲೇಷ್ಯಾ ಶಾಲೆಗಳಿಗೂ ಬೆದರಿಕೆ ಬಂದಿರುವುದು ಗೊತ್ತಾಗಿದೆ’ ಎಂದು ಹೇಳಿದರು.

‘ಬೆದರಿಕೆ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತನಿಖೆ ಅಗತ್ಯವಿದೆ. ಕೆಲವೇ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಸಿಬಿಐ ಹೇಳಿದೆ. ಮಾಹಿತಿ ಬಂದ ಕೂಡಲೇ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT