ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 21 ಕೋಟಿಯ ಡ್ರಗ್ಸ್: ಸಿನಿ ತಾರೆಯರ ಮೇಲೆ ಅನುಮಾನ

Published 17 ಡಿಸೆಂಬರ್ 2023, 15:42 IST
Last Updated 17 ಡಿಸೆಂಬರ್ 2023, 15:42 IST
ಅಕ್ಷರ ಗಾತ್ರ

ಬೆಂಗಳೂರು: ರಾಮಮೂರ್ತಿನಗರದ ಮನೆಯೊಂದರಲ್ಲಿ ಇತ್ತೀಚೆಗೆ ಜಪ್ತಿ ಮಾಡಿದ್ದ ₹ 21 ಕೋಟಿ ಮೌಲ್ಯದ ಡ್ರಗ್ಸ್ ಪ್ರಕರಣದಲ್ಲಿ ಸಿನಿ ತಾರೆಯರು, ಉದ್ಯಮಿಗಳು ಹಾಗೂ ವಿವಿಧ ಕ್ಷೇತ್ರದ ವ್ಯಕ್ತಿಗಳ ಹೆಸರು ಕೇಳಿಬಂದಿದೆ.

ಹೊಸ ವರ್ಷಾಚರಣೆ ಪಾರ್ಟಿಗಳಿಗೆ ಪೂರೈಸಲೆಂದು ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿತ್ತು. ದಾಳಿ ಮಾಡಿದ್ದ ಸಿಸಿಬಿ ಪೊಲೀಸರು, ನೈಜೀರಿಯಾದ ಪ್ರಜೆ ಲಿಯೋನಾರ್ಡ್ ಒಕ್ವುಡಿಲಿ (44) ಎಂಬಾತನನ್ನು ಬಂಧಿಸಿದ್ದರು.

‘ಪ್ರಮುಖ ಪೆಡ್ಲರ್ ಆಗಿದ್ದ ಲಿಯೋನಾರ್ಡ್, ನಗರದಲ್ಲಿರುವ ಉಪ ಪೆಡ್ಲರ್‌ಗಳ ಮೂಲಕ ಡ್ರಗ್ಸ್ ಮಾರುತ್ತಿದ್ದ. ಕೆಲ ಸಿನಿಮಾ ನಟ–ನಟಿಯರು, ಕೆಲ ವ್ಯಾಪಾರಿಗಳು,  ಉದ್ಯಮಿಗಳು ಹಾಗೂ ವಿವಿಧ ಕ್ಷೇತ್ರಗಳ ಕೆಲ ವ್ಯಕ್ತಿಗಳು ಡ್ರಗ್ಸ್ ಖರೀದಿಸುತ್ತಿದ್ದರೆಂಬ ಮಾಹಿತಿ ಇದೆ. ಆದರೆ, ಅದಕ್ಕೆ ಸಂಬಂಧಪಟ್ಟ ಪುರಾವೆಗಳು ಲಭ್ಯವಾಗಿಲ್ಲ’ ಎಂದು ಮೂಲಗಳು ಹೇಳಿವೆ.

‘ಆರೋಪಿ ಲಿಯೋನಾರ್ಡ್, ಎಲ್ಲಿಂದ ಡ್ರಗ್ಸ್ ತಂದಿದ್ದ? ಯಾರಿಗೆ ಮಾರುತ್ತಿದ್ದ? ಎಷ್ಟು ಪ್ರಮಾಣದಲ್ಲಿ ವಹಿವಾಟು ನಡೆಸಿದ್ದ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಸದ್ಯಕ್ಕೆ ತನಿಖೆ ನಡೆಸಲಾಗುತ್ತಿದೆ. ಈ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಂಡು, ತನಿಖೆ ಮುಂದುವರಿಸಲಾಗುವುದು. ಅಗತ್ಯವಿದ್ದರೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ತಿಳಿಸಿವೆ.

ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು: ಹೊಸ ವರ್ಷಾಚರಣೆಯಂದು ಡ್ರಗ್ಸ್ ಮಾರಾಟ ಹೆಚ್ಚಾಗುವ ಮಾಹಿತಿ ತಿಳಿದಿರುವ ಪೊಲೀಸರು, ಹಳೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

‘ಡ್ರಗ್ಸ್ ಸಾಗಣೆ, ಮಾರಾಟ ಹಾಗೂ ಸೇವನೆಗೆ ಸಂಬಂಧಪಟ್ಟ ಅಪರಾಧಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಸುಮಾರು 180 ಮಂದಿ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT