ಬೆಂಗಳೂರು: ಮಹದೇವಪುರದ ಕಿಮ್ಸ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದ ಉದ್ಘಾಟನೆಗೆ ಭಾನುವಾರ ಬಂದಿದ್ದ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಜೂನಿಯರ್ ಎನ್ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕೆಂಬ ಆಸೆಯಿಂದ ಹಲವರು ಆಸ್ಪತ್ರೆಯ ಒಳಗೆ ನುಗ್ಗಿದ್ದರು. ಇದರಿಂದ ಆಸ್ಪತ್ರೆಯ ಎಸ್ಕಲೇಟರ್ಗೆ ಹಾನಿ ಆಗಿದೆ. ಕೆಲವರು ಬ್ಯಾರಿಕೇಡ್ ಹಾಗೂ ಕಾಂಪೌಂಡ್ ಹಾರಿ ಒಳಕ್ಕೆ ನುಗ್ಗಿದ್ದರು. ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಯಿತು ಎಂದು ಪೊಲೀಸರು ಹೇಳಿದರು.

ಬಳಿಕ ಬಿಗಿ ಭದ್ರತೆ ನಡುವೆ ಜೂನಿಯರ್ ಎನ್ಟಿಆರ್ ಅವರನ್ನು ಪೊಲೀಸರು ಕರೆದೊಯ್ದರು.

‘ನನ್ನ ಅಜ್ಜ ಈ ಆಸ್ಪತ್ರೆಗೆ ಶಿಲಾನ್ಯಾಸ ಮಾಡಿದ್ದರು. ಅಜ್ಜನ ಆಶೀರ್ವಾದ ಮತ್ತು ಅಭಿಮಾನಿಗಳ ಪ್ರೀತಿಯಿಂದ ಸೂಪರ್ ಸ್ಪೆಷಾಲಿಟಿ ವಿಭಾಗವನ್ನು ನಾನು ಉದ್ಘಾಟಿಸುತ್ತಿದ್ದೇನೆ’ ಎಂದು ಜೂನಿಯರ್ ಎನ್ಟಿಆರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.