ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಲೆಕ್ಟ್ರಾನಿಕ್ ಸಿಟಿ GR ಫಾರ್ಮ್‌ಹೌಸ್‌ನಲ್ಲಿ ರೇವ್‌ ಪಾರ್ಟಿ: ಐವರ ಬಂಧನ

ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಡ್ರಗ್ಸ್ ಸಮೇತ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
Published 20 ಮೇ 2024, 11:35 IST
Last Updated 20 ಮೇ 2024, 11:35 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿರುವ ಜಿ.ಆರ್. ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಡ್ರಗ್ಸ್ ಸಮೇತ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಸನ್‌ಸೆಟ್‌ ಟು ಸನ್‌ರೈಸ್ ವಿಕ್ಟರಿ’ ಹೆಸರಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ, ಫಾರ್ಮ್‌ ಹೌಸ್ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿ ಡ್ರಗ್ಸ್ ಜಪ್ತಿ ಮಾಡಿದೆ.

‘ಗೋಪಾಲ್ ರೆಡ್ಡಿ ಎಂಬುವವರಿಗೆ ಸೇರಿದ್ದ ಜಿ.ಆರ್. ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಡ್ರಗ್ಸ್ ಪೂರೈಕೆ ಮಾಡಿದ್ದ ಪೆಡ್ಲರ್ ಸೇರಿ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಸುಮಾರು 100 ಮಂದಿ ಪಾಲ್ಗೊಂಡಿದ್ದರು. ಇವರಲ್ಲಿ ಉದ್ಯಮಿಗಳು ಹಾಗೂ ಪ್ರಭಾವಿಗಳ ಮಕ್ಕಳು, ಸಿನಿ ತಾರೆಯರು ಇರುವ ಮಾಹಿತಿ ಇದೆ. ಅವರೆಲ್ಲರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಪಾರ್ಟಿ ಆಯೋಜನೆ ಮಾಡಿದ್ದು ಯಾರು ? ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಫಾರ್ಮ್‌ ಹೌಸ್‌ನಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೊ ಗಾಂಜಾ ಪತ್ತೆಯಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT