ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ

Published 29 ಡಿಸೆಂಬರ್ 2023, 10:13 IST
Last Updated 29 ಡಿಸೆಂಬರ್ 2023, 10:13 IST
ಅಕ್ಷರ ಗಾತ್ರ

ಚಿಂತಾಮಣಿ: ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ಜತೆ ಅಸಭ್ಯವಾಗಿ ವರ್ತಿಸಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇತ್ತೀಚೆಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ಶಿಕ್ಷಕಿ 10ನೇ ತರಗತಿ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ವಿದ್ಯಾರ್ಥಿಗೆ ಮುತ್ತಿಡುತ್ತಿರುವುದು, ಕೈಯಲ್ಲಿ ಹೂ ಹಿಡಿದು ವಿದ್ಯಾರ್ಥಿಯನ್ನು ಬರ ಸೆಳೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರವನ್ನು ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಬುಧವಾರ ಶಾಲೆಗೆ ಭೇಟಿ ನೀಡಿ ಘಟನೆ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಪ್ರತಿಕ್ರಿಯೆಗಾಗಿ ದೂರವಾಣಿ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಸಂಪರ್ಕಿಸಲಾಯಿತು. ‘ಶಾಲೆಯಲ್ಲಿ ವಿಚಾರಣೆ ನಡೆಸುತ್ತಿದ್ದೇನೆ, ಪೋಷಕರು ಇದ್ದಾರೆ. ನಂತರ ಮಾಹಿತಿ ನೀಡುವುದಾಗಿ ತಿಳಿಸಿದರು. ಸಂಜೆಯವರೆಗೂ ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT