ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ಧಾರಾಕಾರ ಮಳೆ: ಮರಬಿದ್ದು 2 ಕಾರುಗಳು ಜಖಂ

Published 21 ಮೇ 2024, 18:14 IST
Last Updated 21 ಮೇ 2024, 18:14 IST
ಅಕ್ಷರ ಗಾತ್ರ

ಮಂಗಳೂರು: ನಗರದಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕರಂಗಲ್ಪಾಡಿಯ ಕೋರ್ಟ್‌ ರಸ್ತೆಯ ಬಳಿ ಮರದ ಕೊಂಬೆ ತುಂಡಾಗಿ, ಕಾರುಗಳ ಮೇಲೆ ಬಿದ್ದಿದೆ. ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ.

ಮರದ ಕೊಂಬೆಯಡಿ ಸಿಲುಕಿ ವಿದ್ಯುತ್ ತಂತಿಗಳೂ ತುಂಡಾಗಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಉರುಳಿ ಬಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ಈ ಘಟನೆ ನಡೆದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಎರಡು ಕಾರುಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT