ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ಕನ್ನಡ | ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

Published : 18 ಜುಲೈ 2024, 5:03 IST
Last Updated : 18 ಜುಲೈ 2024, 5:03 IST
ಫಾಲೋ ಮಾಡಿ
Comments

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ.

ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 29.1 ಮೀಟರ್‌ವರೆಗೆ ತಲುಪಿದೆ. ಶಂಭೂರು ಬಳಿ ಎಎಂಆರ್ ಅಣೆಕಟ್ಟೆ ಬಳಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, 18.9 ಮೀಟರ್ ವರೆಗೂ ನೀರಿನ ಮಟ್ಟ ತಲುಪಿದೆ. ಈ ಅಣೆಕಟ್ಟೆಯ ಎಲ್ಲ ಗೇಟುಗಳನ್ನು ತೆರೆಯಲಾಗಿದೆ.

7 ಮೀ ಎತ್ತರದಷ್ಟು ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ತುಂಬೆ ಅಣೆಕಟ್ಟೆಯಲ್ಲಿ ಸದ್ಯಕ್ಕೆ 6 ಮೀ ವರೆಗೆ ಮಾತ್ರ ನೀರು ಸಂಗ್ರಹಿಸಲಾಗುತ್ತದೆ.‌ ಈ ಅಣೆಕಟ್ಟೆಯ ಎಲ್ಲ 30 ಗೇಟ್‌ಗಳನ್ನು ತೆರೆಯಲಾಗಿದೆ.

ಗುರುವಾರ ಬೆಳಿಗ್ಗೆಯಿಂದಲೂ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಇತರ ಪ್ರಮುಖ ನದಿಗಳಾದ ಕುಮಾರಧಾರಾ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಲಕೂ ತುಂಬಿ ಹರಿಯುತ್ತಿವೆ.

ಗುರುವಾರ ಬೆಳಿಗ್ಗೆ 8.30ರವರೆಗಿನ 24 ಗಂಟೆ ಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಲಾಯಿಲದಲ್ಲಿ 17.35 ಸೆಂ.ಮೀ, ಮೆಲಂತಬೆಟ್ಟುವಿನಲ್ಲಿ 16.40, ಬಳೆಂಜದಲ್ಲಿ 16.35, ಕಲ್ಮಂಜದಲ್ಲಿ 15.95, ಪಟ್ರಮೆಯಲ್ಲಿ 15.45, ಮುಂಡಾಜೆಯಲ್ಲಿ 15.00, ಮಲವಂತಿಗೆಯಲ್ಲಿ 14.50, ಉಜಿರೆಯಲ್ಲಿ 14.30, ಅರಸಿನಮಕ್ಕಿಯಲ್ಲಿ 13.95, ಹಾಗೂ ಬಂಟ್ವಾಳ ತಾಲ್ಲೂಕಿನ ಮಂಚಿಯಲ್ಲಿ 14.00 ಸೆಂ.ಮೀ ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT