ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿ ಕುಂಠಿತ: ಹೇಮಲತಾ ಕೆ.

Published : 12 ಜುಲೈ 2024, 15:40 IST
Last Updated : 12 ಜುಲೈ 2024, 15:40 IST
ಫಾಲೋ ಮಾಡಿ
Comments

ರಾಣೆಬೆನ್ನೂರು: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಹಲವಾರು ಅಪಾಯಗಳು ಎದುರಾಗುತ್ತಿದೆ. ಭೂಮಿಯ ಮೇಲೆ ಅವಶ್ಯಕತೆಗಿಂತಲೂ ಹೆಚ್ಚಿನ ಜನಸಂಖ್ಯೆ ಇದ್ದರೇ ಅನೇಕ ನೈಸರ್ಗಿಕ ವಿಕೋಪಗಳು ಸಂಭವಿಸುತ್ತದೆ. ಆದ್ದರಿಂದ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಹಿರೇಕೆರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ ಕೆ. ಹೇಳಿದರು.

ತಾಲ್ಲೂಕಿನ ಸುಣಕಲ್ಲಬಿದರಿಯ ಶ್ರೀ ಅರಳಿ ಶಿದ್ದಿಂಗಪ್ಪ ಬಸಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಏರ್ಪಡಿಸಿದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರದ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ.ಮಹಮ್ಮದ ಶಫಿ ವದ್ದೋ ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿಯು ಕುಂಠಿತವಾಗುತ್ತದೆ ಎಂದರು.

ಪ್ರಾಚಾರ್ಯ ಪ್ರೊ.ಆರ್.ಎಫ್‌. ಅಯ್ಯನಗೌಡ್ರ ಅಧ್ಯಕ್ಷತೆ ವಹಿಸಿದ್ದರು. ವಿಶ್ವಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ಕ್ವಿಜ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಐಕ್ಯೂಎಸಿ ಸಂಯೋಜಕಿ ಲೋಹಿಯಾ ಕೆಜೆಆರ್, ಬಸವರಾಜ ಹುಗ್ಗಿ, ಗ್ರಂಥಪಾಲಕ ಹನುಮಂತರಾಜು ಎನ್.ಬಿ., ಮಂಜುನಾಥ ಎನ್.ಜಿ., ಯಮುನ ನಾಯ್ಕ ಎಂ. ಸಂಯೋಜಕ ಬಸನಗೌಡ ಮಲ್ಲೂರ, ಕಾಂತಗೌಡ, ಸುದೀಪ ಎಂ.ಜಿ., ಹೇಮಂತ ಬಳಿಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT