ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಬಿಜೆಪಿ ಸಂಸದ ಉಮೇಶ್ ಜಾಧವ್ ಬೆಂಬಲಿಗನ ಹತ್ಯೆ

Published 1 ಮಾರ್ಚ್ 2024, 2:52 IST
Last Updated 1 ಮಾರ್ಚ್ 2024, 2:52 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸಾಗನೂರು ಗ್ರಾಮದ ನಿವಾಸಿ, ಸಂಸದ ಡಾ. ಉಮೇಶ್ ಜಾಧವ್ ಅವರ ಆಪ್ತ ಗಿರೀಶ್ ಬಾಬು ಚಕ್ರ (31) ಎಂಬುವವರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಹೊಲದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇತ್ತೀಚೆಗಷ್ಟೇ ಗಿರೀಶ್ ಬಾಬು ಅವರನ್ನು ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿತ್ತು.

ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT