ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

Published 23 ಜನವರಿ 2024, 16:19 IST
Last Updated 23 ಜನವರಿ 2024, 16:19 IST
ಅಕ್ಷರ ಗಾತ್ರ

ಕಲಬುರಗಿ: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಸಾಬೀತಾಗಿದ್ದರಿಂದ ತಾಲ್ಲೂಕಿನ ಪಾಳಾ ಗ್ರಾಮದ ಅನಿಲ್ ಭೀಮರಾಯ ಮೇಲಿನಕೇರಿ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಸಂತ್ರಸ್ತ ಬಾಲಕಿಯ ಪೋಷಕರು ಮಗಳಿಗೆ ಚುಡಾಯಿಸದಂತೆ ತಿಳಿ ಹೇಳಿದ್ದರೂ ಅನಿಲ್ ತನ್ನ ಚಾಳಿ ಬಿಟ್ಟಿರಲಿಲ್ಲ. ಆತನ ಪೋಷಕರೂ ಮಗನಿಗೆ ಬುದ್ಧಿ ಹೇಳಿರಲಿಲ್ಲ. 2022ರ ಫೆಬ್ರುವರಿ 10ರಂದು ಬಾಲಕಿಯನ್ನು ತನ್ನ ಮನೆಯ ಹಿತ್ತಲಿಗೆ ಕರೆಸಿಕೊಂಡ ಅಪರಾಧಿ ಬಾಲಕಿಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದ. ಹೀಗೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ. ಈ ಕುರಿತು ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಬಸವರಾಜ ತೇಲಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ–ಎಫ್‌ಟಿಎಸ್ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ತೀರ್ಪು ಪ್ರಕಟವಾದ ತಿಂಗಳೊಳಗಾಗಿ ₹ 7 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT