ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು–ಮೈಸೂರು ಲೋಕಸಭಾ ಕ್ಷೇತ್ರ | ನಾನೂ BJP ಟಿಕೆಟ್ ಆಕಾಂಕ್ಷಿ: ಭಾಸ್ಕರ್ ರಾವ್

Published 28 ಫೆಬ್ರುವರಿ 2024, 5:06 IST
Last Updated 28 ಫೆಬ್ರುವರಿ 2024, 5:06 IST
ಅಕ್ಷರ ಗಾತ್ರ

ಮಡಿಕೇರಿ: ‘ಕೊಡಗು– ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿ ಸಲು ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ’ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು.

‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಕಾರ್ಯನಿರ್ವಹಿಸಿದ್ದೇನೆ. ರಾಜಕೀಯವಾಗಿ ಇನ್ನಷ್ಟು ಸೇವೆ ಮಾಡಲು ಬಯಸಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದೇನೆ’ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಪಕ್ಷವು ಬೇರೆ ಆಕಾಂಕ್ಷಿಗೆ ಟಿಕೆಟ್ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುವೆ. ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT