ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿಕಾರ ಮೊಟಕು

Published : 11 ಜುಲೈ 2024, 23:31 IST
Last Updated : 11 ಜುಲೈ 2024, 23:31 IST
ಫಾಲೋ ಮಾಡಿ
Comments

ಮೈಸೂರು: ಮುಡಾ ಹಗರಣದ ಬೆನ್ನಲ್ಲೇ, ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಇದ್ದ ಅಧಿಕಾರವನ್ನು ನಗರಾಭಿವೃದ್ಧಿ ಇಲಾಖೆಯು ಮೊಟಕುಗೊಳಿಸಿದೆ. ಅದನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಿಗೆ ವರ್ಗಾಯಿಸಿದೆ.

ಈ ಕುರಿತು ಜುಲೈ 8ರಂದು ಆದೇಶ ಹೊರಡಿಸಿದ್ದು, ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಬಜೆಟ್ ಪರಿಶೀಲನೆ ಮತ್ತು ಅನುಮೋದನೆ, ಆಡಿಟ್‌ ವರದಿಗಳ ಪರಿಶೀಲನೆಯನ್ನು ಆಯುಕ್ತಾಲಯದ ಆಯುಕ್ತರೇ ಮಾಡಲಿದ್ದಾರೆ. ಪ್ರಾಧಿಕಾರಗಳ ಸಭೆಗಳ ನಡಾವಳಿಗಳನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡುವ ಮತ್ತು ₹1 ಕೋಟಿ ಮೇಲ್ಪಟ್ಟ ಹಣಕಾಸಿನ ವ್ಯವಹಾರಗಳ ನಿರ್ವಹಣೆಯ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.

ಪ್ರಾಧಿಕಾರಗಳ ಚಟುವಟಿಕೆಗಳು ಹಾಗೂ ಸಿಬ್ಬಂದಿ ಮೇಲೆ ನಿಗಾ ಇಡುವ ಜವಾಬ್ದಾರಿಯನ್ನೂ ಈ ಆಯುಕ್ತರಿಗೆ ನೀಡಲಾಗಿದೆ. ಪ್ರಾಧಿಕಾರಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆ ಆಗುವ ಎಲ್ಲ ದಾಖಲೆಗಳೂ ಇದೇ ಆಯುಕ್ತರ ಮುಖಾಂತರ ಹೋಗಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT