ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ: ಮೈಸೂರಿಗೆ ಹೊರಟಿದ್ದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬಿಡದಿ ಪೊಲೀಸ್ ವಶಕ್ಕೆ

Published : 12 ಜುಲೈ 2024, 6:25 IST
Last Updated : 12 ಜುಲೈ 2024, 6:25 IST
ಫಾಲೋ ಮಾಡಿ
Comments

ರಾಮನಗರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ಬಿಜೆಪಿ ಶಾಸಕರನ್ನು ಬಿಡದಿ ಪೊಲೀಸರು ನಗರದಲ್ಲಿ ವಶಕ್ಕೆ ಪಡೆದರು.

ರಾಮನಗರ ಮಾರ್ಗವಾಗಿ ಮೈಸೂರಿಗೆ ಹೊರಟಿದ್ದ ವಿಜಯೇಂದ್ರ, ಶಾಸಕರಾದ ಮುನಿರತ್ನ ಸೇರಿದಂತೆ ಹಲವು ಮುಖಂಡರ ವಾಹನಗಳನ್ನು ತಡೆದ ಪೊಲೀಸರು, ಪ್ರಮುಖರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಸುಮಾರು 20 ನಿಮಿಷ ಠಾಣೆಯಲ್ಲಿಟ್ಟು ನಂತರ ಬಿಟ್ಟು ಕಳಿಸಿದರು.

ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಠಾಣೆ ಮುಂಭಾಗ ಜಮಾಯಿಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT