ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ | ಟ್ರ್ಯಾಕ್ಟರ್– ಕಾರು ಡಿಕ್ಕಿ; ತಂದೆ ಮಗಳ ಸಾವು

Published 11 ಮೇ 2024, 15:26 IST
Last Updated 11 ಮೇ 2024, 15:26 IST
ಅಕ್ಷರ ಗಾತ್ರ

ಶಿಕಾರಿಪುರ: ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ– ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು.  ಸೈಯದ್ ಅವರು ತಮ್ಮ ಮೊಮ್ಮಗಳನ್ನು ತುಮಕೂರಿನಲ್ಲಿರುವ ವಸತಿ ಶಾಲೆಗೆ ಸೇರಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಚಾಲಕ ಸೇರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT